ಶಿವಮೊಗ್ಗ: (ಸಿಟಿ ರೌಂಡ್ಸ್ ನ್ಯೂಸ್) ಅಣ್ಣಪ್ಪ ಎಂ
ಭೂಮಿ ಹುಣ್ಣಿಮೆ ಹಬ್ಬದ ವಿಷೇಶತೆ:
ಶಿವಮೊಗ್ಗ, ಮಲೆನಾಡಿನ ರೈತರು ಶ್ರದ್ಧಾ ಭಕ್ತಿಯಿಂದ ಭೂಮಿ ಹುಣ್ಣಿಮೆ ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು. ಮಲೆನಾಡು ಭಾಗದ ರೈತರು ಆಚರಿಸುವ ಶೀಗಿ ಹುಣ್ಣಿಮೆ ಅಥವಾ ಭೂಮಿ ಹುಣ್ಣಿಮೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ವಿಶೇಷ ಖಾದ್ಯಗಳನ್ನು ತಯಾರಿಸಿ, ಭೂ ಮಣ್ಣಿ ಬುಟ್ಟಿಗಳಲ್ಲಿ ಕೊಂಡೊಯ್ದು ಎಡೆ ಇಡಲಾಗುತ್ತದೆ. ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಹಬ್ಬದ ಅಡುಗೆಯನ್ನು ಎಲ್ಲೆಡೆ ಬೀರಲಾಗುತ್ತದೆ.
ಮನೆಯವರೆಲ್ಲ ಹೊಲದಲ್ಲೇ ಕುಳಿತು ಊಟ ಮಾಡಿ ಮನೆಗೆ ಮರಳುತ್ತಾರೆ. ಅನ್ನದಾತರು ಶ್ರದ್ಧಾ ಭಕ್ತಿಯಿಂದ ಈ ಪೂಜೆ ಸಲ್ಲಿಸುತ್ತಾರೆ. ಭೂಮಿ ತಾಯಿಗೆ ವಿಶೇಷ ಗೌರವ ಸಲ್ಲಿಸುವ ಆಚರಣೆ ಇದಾಗಿದೆ. ಇದಕ್ಕಾಗಿ ಒಂದು ವಾರದ ಸಿದ್ಧತೆಯೂ ಇರಲಿದೆ. ಭೂಮಣ್ಣಿ ಬುಟ್ಟಿ ತಯಾರಿ ಭೂಮಿ ಹುಣ್ಣಿಮೆಯಲ್ಲಿ ಭೂಮಣ್ಣಿ ಬುಟ್ಟಿಗೆ ವಿಶೇಷ ಸ್ಥಾನ. ಬುಟ್ಟಿಗೆ ಸಗಣಿ, ಕೆಮ್ಮಣ್ಣು ಹಚ್ಚಲಾಗುತ್ತದೆ. ಅದರ ಮೇಲೆ ಅಕ್ಕಿ ಹಿಟ್ಟಿನಲ್ಲಿ ಹಸೆ ಚಿತ್ತಾರಗಳನ್ನು ಬಿಡಿಸಲಾಗುತ್ತದೆ.

More Stories
ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ : (ಎಂ ಎಸ್ ಪಿ) ಜಾರಿಗೋಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಸರ್ಕಾರಕ್ಕೆ ಒತ್ತಾಯ..!!
ಸಿಟಿರೌಂಡ್ಸ್ ನ್ಯೂಸ್ ಬಿಗ್ ಇಂಫ್ಯಾಕ್ಟ್ 125 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ದಾಳಿ 52 ವಾಹನಗಳು ವಶಕ್ಕೆ ..!!
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …