(ಸಿಟಿ ರೌಂಡ್ಸ್ ನ್ಯೂಸ್)
ಅಣ್ಣಪ್ಪ ಎಂ.
- ಶಿವಮೊಗ್ಗ : 2015 ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸೂಚನೆ ನೀಡಿದರು.
- ಇಂದು ಲೋಕೋಪಯೋಗಿ ಭವನದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
- ಕೋರ್ಟ್ ಪ್ರಕರಣ, ಲೋಕಾಯುಕ್ತ ಪ್ರಕರಣಗಳನ್ನು ಹೊರತುಪಡಿಸಿ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ನೀಡುವಂತಿಲ್ಲ. ಸಣ್ಣ ಹಿಡುವಳಿದಾರರಿಗೆ ಯಾವುದೇ ರೀತಿಯಲ್ಲಿ ತೊಂದರೆ ಮಾಡಬಾರದು. 3 ಎಕರೆಗಿಂತ ಹೆಚ್ಚಿನ ಭೂಮಿ ಸಾಗುವಳಿ ಮಾಡುತ್ತಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಳಿಗೆ ಸಚಿವರು ಸೂಚಿಸಿದರು.
- ಗ್ರಾಮಗಳಲ್ಲಿ ಗ್ರಾಮ ಸಭೆ ಮಾಡಿ ಸಾಗುವಳಿದಾರರು, ಅವರ ಜಮೀನಿನ ಕುರಿತು ಮಾಹಿತಿ ತೆಗೆದುಕೊಳ್ಳಬೇಕು. ಬಗರ್‌ಹುಕುಂ ಸಮಸ್ಯೆಗಳನ್ನು ನಿರ್ವಹಿಸಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದರು.
- ಯುಜಿಡಿ ಅನುದಾನಕ್ಕೆ ಪ್ರಸ್ತಾವನೆ : ಯುಜಿಡಿ ಕಾಮಗಾರಿ ಕೈಗೊಳ್ಳಲು ಆನವಟ್ಟಿಗೆ ರೂ.138 ಕೋಟಿ ಮತ್ತು ಸೊರಬಕ್ಕೆ 180.5 ಕೋಟಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಶಿವಮೊಗ್ಗ ನಗರಕ್ಕೆ ಈಗಾಗಲೇ ರೂ.40 ಕೋಟಿ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.
- ಜಿಲ್ಲೆಯ ಯಾವುದೇ ಬೃಹತ್, ಸಣ್ಣ ನೀರಾವರಿ ಕಾಮಗಾರಿಗಳು ಬಾಕಿ ಇದ್ದಲ್ಲಿ, ಅವುಗಳ ಅನುಸರಣೆ ಕೈಗೊಂಡು, ಸಮಸ್ಯೆ ಇದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.
- ಟರ್ಬಿಡಿಟಿ ನೀರು ಕ್ರಮ : ಶಿವಮೊಗ್ಗ ನಗರದಲ್ಲಿ ಮಳೆ ಬಂದ ನಂತರ ಕುಡಿಯುವ ನೀರು ಕೆಂಪಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಪ್ರಸ್ತುತ ಡ್ಯಾಂನಿAದ 35 ಕ್ಯುಸೆಕ್ಸ್ ಮತ್ತು ನದಿಯಿಂದ 10 ಕ್ಯುಸೆಕ್ಸ್ ನೀರನ್ನು ಬಿಡಲಾಗುತ್ತಿದೆ. ನದಿ ನೀರು ಕೆಂಪಾಗಿದ್ದು, ಈ 10 ಕ್ಯುಸೆಕ್ಸ್ ನೀರನ್ನೂ ಡ್ಯಾಂ ನಿಂದಲೇ ಬಿಟ್ಟರೆ ಟರ್ಬಿಡಿಟಿ ನೀರನ್ನು ನಿಯಂತ್ರಿಸಬಹುದೆAದು ಕಾರ್ಯಪಾಲಕ ಅಭಿಯಂತರರು ತಿಳಿಸಿದರು.
- ಸಚಿವರು ಪ್ರತಿಕ್ರಿಯಿಸಿ, ಮಳೆಗಾಲದಲ್ಲಿ ಡ್ಯಾಂ ತುಂಬಿರುವ ಕಾರಣ 10 ಕ್ಯುಸೆಕ್ಸ್ ನೀರನ್ನು ಡ್ಯಾಂ ನಿಂದ ಬಿಡಬಹುದು. ಈ ಬಗ್ಗೆ ಕ್ರಮ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
- ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಬೃಹತ್, ಸಣ್ಣ ನೀರಾವರಿ, ಅರಣ್ಯ ಇಲಾಖೆ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಾಗರ ಉಪವಿಭಾಗಾಧಿಕಾರಿ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.
More Stories
ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ : (ಎಂ ಎಸ್ ಪಿ) ಜಾರಿಗೋಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಸರ್ಕಾರಕ್ಕೆ ಒತ್ತಾಯ..!!
ಸಿಟಿರೌಂಡ್ಸ್ ನ್ಯೂಸ್ ಬಿಗ್ ಇಂಫ್ಯಾಕ್ಟ್ 125 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ದಾಳಿ 52 ವಾಹನಗಳು ವಶಕ್ಕೆ ..!!
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …