ದಿನಾಂಕಃ 25-10-2024 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ{ ನಾಗರಭಾವಿ ಬಸ್ ನಿಲ್ದಾಣದಲ್ಲಿ} ಯಾರೋ ಒಬ್ಬ ವ್ಯಕ್ತಿಯು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್,* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, *ಶ್ರೀ ಅನಿಲ್ ಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು *ಶ್ರೀ ಎ ಜಿ ಕಾರ್ಯಪ್ಪ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, *ಶ್ರೀ ಸುರೇಶ್ ಎಂ,* ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ *ಶ್ರೀ ದೀಪಕ್ ಎಂ. ಎಸ್,* ಪೊಲೀಸ್ ನಿರೀಕ್ಷಕರು, ಮತ್ತು *ಶ್ರೀ ಶಾಂತರಾಜ್* ಪೊಲೀಸ್ ಉಪ ನಿರೀಕ್ಷಕರು, ಕುಂಸಿ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ *ಚಂದ್ರಾನಾಯಕ್, 46 ವರ್ಷ, ಬೀರನ ಕೆರೆ ಗ್ರಾಮ ಶಿವಮೊಗ್ಗ* ಈತನನ್ನು ದಸ್ತಗಿರಿ ಮಾಡಿ, ಸದರಿ ಆರೋಪಿಯಿಂದ *ಅಂದಾಜು ಮೌಲ್ಯ 15,000/- ರೂಗಳ 640 ಗ್ರಾಂ ತೂಕದ ಒಣ ಗಾಂಜಾ* ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ *0213/2024 ಕಲಂ 20(b), 8(c) NDPS ಕಾಯ್ದೆ* ರೀತ್ಯಾ ಪ್ರಕಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ