City Rounds News

Kannada News Website

20ಕ್ಕೂ ಹೆಚ್ಚು ಜನರ ಮೇಲೆ ಹುಚ್ಚುನಾಯಿ ದಾಳಿ

ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ

ಹುಬ್ಬಳ್ಳಿ : ಇತ್ತೀಚಿಗೆ ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ದಾಳಿಯಿಂದ  ರಾಜ್ಯದಲ್ಲಿ ಹಾಗೂ ದೇಶದಲ್ಲಿ ಹಿರಿಯರು ಯುವಕರು ಮಕ್ಕಳ ಮೇಲೆ ಮಾರಣಾಂತಿಕ ದಾಳಿ ನಡೆದಿರು ವಂತಹ   ಘಟನೆಗಳು ನಡೆದಿವೆ.ಅದೇ ರೀತಿ ಇದೀಗ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚುನಾಯಿ ದಾಳಿಗೆ ಸುಮಾರು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹೌದು ಹುಬ್ಬಳ್ಳಿ ನಗರದ ಗೋಕುಲ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹುಚ್ಚುನಾಯಿ ದಾಳಿಯಿಂದ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕೂಡಲೇ ಗಾಯಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಯಿಗೆ ಹುಚ್ಚು ಹಿಡಿದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ ಸದ್ಯ ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.