City Rounds News

Kannada News Website

ಲೈಂಗಿಕ ದೌರ್ಜನ್ಯ ವೆಸಗಿದ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,12,000 ದಂಡ,

ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.

2023ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 30 ವರ್ಷದ ವ್ಯಕ್ತಿಯು 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 376 (2) (ಎಫ್)(ಎನ್), 323, 506, 448 ಐಪಿಸಿ ಮತ್ತು ಕಲಂ 06 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾದ ಶ್ರೀ ಶೈಲ್ ಕುಮಾರ್ ಜೆ, ಸಿಪಿಐ ಭದ್ರಾವತಿ ನಗರ ವೃತ್ತ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಹೆಚ್. ಆರ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಮೋಹನ್ ಜೆ. ಎಸ್ ರವರು ದಿನಾಂಕಃ 07-11-2024 ರಂದು ಪ್ರಕರಣದ ಆರೋಪಿ ಭದ್ರಾವತಿ ತಾಲ್ಲೂಕಿನ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,12,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ 01 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 1 ಲಕ್ಷ ಮತ್ತು ಸರ್ಕಾರದಿಂದ 5 ಲಕ್ಷ ರೂಪಾಯಿಗಳನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಿರುತ್ತಾರೆ.