City Rounds News

Kannada News Website

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ 4 ವರ್ಷ ಕಠಿಣ ಕಾರಾವಾಸ ಶಿಕ್ಷೆ.

ಶಿವಮೊಗ್ಗ :ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ 

       ಶಿವಮೊಗ್ಗ: 2023ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 43 ವರ್ಷದ ವ್ಯಕ್ತಿಯು 09 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 376(ಎ)(ಬಿ) ಐಪಿಸಿ ಮತ್ತು ಕಲಂ 08 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ. 

ಪ್ಕರಣದ ಆಗಿನ ತನಿಖಾಧಿಕಾರಿಗಳಾದ ಶಾಂತಿನಾಥ್, ಸಿಪಿಐ ಭದ್ರಾವತಿ ನಗರ ವೃತ್ತ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಹೆಚ್. ಆರ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಶ್ರೀ ಮೋಹನ್ ಜೆ. ಎಸ್ ರವರು ದಿನಾಂಕಃ 07-11-2024 ರಂದು ಪ್ರಕರಣದ ಆರೋಪಿ ಭದ್ರಾವತಿ ತಾಲ್ಲೂಕಿನ 43 ವರ್ಷದ ವ್ಯಕ್ತಿಗೆ 04 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 51,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 03 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 50,000/- ಮತ್ತು ಸರ್ಕಾರದಿಂದ 2 ಲಕ್ಷರೂಗಳನ್ನು ನೊಂದ ಬಾಲಕಿಗೆ ನೀಡಲು ನ್ಯಾಯಾಧೀಶರು ಆದೇಶಿಸಿರುತ್ತಾರೆ.