ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ದಿನಾಂಕಃ 27-05-2024 ರಂದು ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಎನ್ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮಲಗಿದ್ದ 02 ಹಸುಗಳನ್ನು ಯಾರೋ ಕಳ್ಳರು ಕಾರಿನಲ್ಲಿ ಬಂದು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಠಾಣಾ ಗುನ್ನೆ ಸಂಖ್ಯೆ 0127/2024 ಕಲಂ 379 ಐಪಿಸಿ* ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಕಳುವಾದ ಹಸುಗಳು ಹಾಗೂ ಆರೋಪಿತರ ಪತ್ತೆಗಾಗಿ ಮಿಥುನ್ ಕುಮಾರ್ ಜಿ.ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತಹ ಅನಿಲ್ ಕುಮಾರ್ ಭೂಮ ರಡ್ಡಿ ಮತ್ತು ಕಾರಿಯಪ್ಪ ಎ, ಜಿ, ರವರ ಮಾರ್ಗದರ್ಶನದಲ್ಲಿ, ಗೋಪಾಲ ಕೃಷ್ಣ ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು ಸಾಗರ ಉಪ ವಿಭಾಗ ಸಾಗರ ರವರ ಮೇಲ್ವಿಚಾರಣೆಯಲ್ಲಿ, ಸಂತೋಷ್ ಶೆಟ್ಟಿ ಪೊಲೀಸ್ ವೃತ್ತ ನಿರೀಕ್ಷಕರು ಕಾರ್ಗಲ್ ವೃತ್ತ ರವರ ನೇತೃತ್ವದಲ್ಲಿ ಸಾಗರ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ರವರಾದ ಯಲ್ಲಪ್ಪ ಟಿ ಹಿರೇಗಣ್ಣನ್ನನವರ್, ಶ್ರೀ ನಾಗರಾಜ ಟಿ ಎಂ ಹಾಗೂ ಸಿಬ್ಬಂಧಿಗಳಾದ ಹೆಚ್.ಸಿ ಸನಾವುಲ್ಲಾ, ಶೇಕ್ ಫೈರೋಜ್, ಸಿಪಿಸಿ ವಿಕಾಸ್, ರವಿಕುಮಾರ್, ಕೃಷ್ಣಮೂರ್ತಿ ಹಾಗೂ ವಿಶ್ವನಾಥ ರವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
ಸದರಿ ತನಿಖಾ ತಂಡವು ದಿನಾಂಕ: 08-11-2024 ರಂದು ಪ್ರರಕಣದ ಆರೋಪಿಗಳಾದ 1) ಮೊಹಮ್ಮದ್ ಸಲ್ಮಾನ್, 19 ವರ್ಷ, ಮೆಹಬೂಬ್ ನಗರ, ಬೈಪಾಸ್ ಹತ್ತಿರ ಶಿವಮೊಗ್ಗ ಟೌನ್ ಮತ್ತು 2) ಮೊಹಮ್ಮದ್ ಶಾಹಿದ್, 25 ವರ್ಷ, ವಾದಿ ಎ ಹುದಾ,ಶಿವಮೊಗ್ಗ ಟೌನ್ ಇವರನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ 10,00,000/- ರೂಗಳ ಟಯೋಟಾ ಫಾರ್ಚುನರ್ ಕಾರನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ