City Rounds News

Kannada News Website

27 ವರ್ಷದ ಮಹಿಳೆಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ..!

ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.

2016ನೇ ಸಾಲಿನಲ್ಲಿ ಶಿವಮೊಗ್ಗ ನಗರದ 62 ವರ್ಷದ ವ್ಯಕ್ತಿಯೊಬ್ಬನು 27 ವರ್ಷದ ಮಹಿಳೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆಯ ಫೋಟೋಗಳನ್ನು ಇಟ್ಟುಕೊಂಡು, ಒಂದು ವೇಳೆ ದೂರು ನೀಡದರೆ ನಿನ್ನ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾನೆಂದು ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ 417, 406, 420, 506 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿರುತ್ತೆ.

ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಚಂದ್ರಪ್ಪ. ಕೆ. ಸಿಪಿಐ, ಕೋಟೆ ವೃತ್ತರವರು ತನಿಖೆ ಪೂರೈಸಿ ಘನ 2ನೇ ಜೆಎಂಎಫ್ಸಿ ನ್ಯಾಯಾಲಯ, ಶಿವಮೊಗ್ಗಕ್ಕೆ ಆರೋಪಿತನ ವಿರುದ್ದ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಕಿರಣ್‌ ಕುಮಾರ್ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದು ಘನ 2ನೇ ಜೆಎಂಎಫ್ಸಿ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿಯ ವಿರುದ್ದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀಮತಿ ಶಾರದಾ ಕೊಪ್ಪದರವರು ಪ್ರಕರಣದ ಆರೋಪಿಗೆ 1 ವರ್ಷ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ಮತ್ತು ರೂ 40,000/- ರೂ ಗಳ ದಂಡ ವಿಧಿಸಿ, ದಂಡದ ಮೊತ್ತದಲ್ಲಿ 36,000/- ರೂಗಳನ್ನು ನೊಂದ ಮಹಿಳೆಗೆ ನೀಡಲು ಆದೇಶಿಸಿರುತ್ತಾರೆ.