ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ದಾವಣಗೆರೆ: ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಒಂದು ಲಕ್ಷ ನಗದು ಇನ್ನೋವಾ ಕಾರು ಹಾಗೂ ನಗರದ ಮೂರನೇ ಕ್ರಾಸ್ ನಲ್ಲಿರುವ ಮನೆಯ ಮೇಲೆ
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ ಎಸ್. ಕೌಲಪುರೆ ನೇತೃತ್ವದಲ್ಲಿ. ದಾಳಿ ನಡೆಸಲಾಗಿದೆ ಇನ್ಸ್ಪೆಕ್ಟರ್ ಮಧುಸೂದನ್ ಹಾಗೂ ಪ್ರಭು ಸೇರಿ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅನುಕಂಪದ ಆಧಾರದ ಮೇರೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಹಲವು ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.


More Stories
ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ : ಕಂದಾಯ ವಿಭಾಗದ ಸಿಬ್ಬಂದಿ..!
ಲಂಚ ಪಡೆಯುವಾಗ ಕೆ ಟಿ ಜೆ ನಗರ ಪೊಲೀಸ್ ಠಾಣೆಯ ಎ ಎಸ್ ಐ ಈರಣ್ಣ ಲೋಕಾಯುಕ್ತ ಬಲೆಗೆ..!