City Rounds News

Kannada News Website

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ..!!

ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್ 
ಅಣ್ಣಪ್ಪ ಎಂ.

ಆಚರಿಸಲಾಗುತ್ತಿರುವ ಅಪರಾಧ ತಡೆ ಮಾಸಾಚರಣೆ–2024 ರ ಅಂಗವಾಗಿ, ಈ ದಿನ ದಿನಾಂಕಃ 09-12-2024 ರಂದು ಬೆಳಗ್ಗೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ತಿರುಮಲೇಶ್ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ಹಾಗೂ KSRCT ಬಸ್ ನಿಲ್ದಾಣಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿಧ್ಯಾರ್ಥಿಗಳು, ಬಸ್ ಚಾಲಕರು ಹಾಗೂ ಆಟೋ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಲಾಯಿತು .

18 ವರ್ಷಕ್ಕಿಂತ ಕಡಿಮೆವಯಸ್ಸಿನವರು ವಾಹನ ಚಾಲನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆದ್ದರಿಂದ ಕಡ್ಡಾಯವಾಗಿ ಚಾಲನಾ ಪರವಾನಿಗೆಯನ್ನು ಪಡೆದ ನಂತರವೇ ವಾಹನವನ್ನು ಚಾಲನೆ ಮಾಡುವುದು, ಮಧ್ಯ ಸೇವನೆ ಮಾಡಿ / ಯಾವುದೇ ಮಾದಕ ದ್ರವ್ಯಗಳ ಅಮಲಿನಲ್ಲಿ, ವಾಹನ ಚಾಲನೆ ಮಾಡಬಾರದು ,ವಾಹನಗಳಲ್ಲಿ ಮಾರ್ಪಡಿಸಿದ / ದೋಷಪೂರಿತ ಸೈಲೆನ್ಸರ್ ಗಳ ಬಳಕೆ ಮತ್ತು ಕರ್ಕಷ ಶಬ್ದವನ್ನುಂಟು ಮಾಡುವ ಹಾರ್ನ್ ಗಳ ಬಳಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ತಿಳಿಸಿದರು. ಸುರಕ್ಷತೆಯ ದೃಷ್ಠಿಯಿಂದ ಕಡ್ಡಾಯವಾಗಿ ದ್ವಿ ಚಕ್ರ ವಾಹನದ ಚಾಲಕ ಮತ್ತು ಹಿಂಬದಿ ಸವಾರ ಇಬ್ಬರೂ ಹೆಲ್ಮೆಟ್ ಅನ್ನು ಧರಿಸಬೇಕು ಮತ್ತು ಕಾರು / ನಾಲ್ಕು ಚಕ್ರದ ವಾಹನ ಚಾಲಕ ಹಾಗೂ ಸವಾರರು ಸೀಟ್ ಬೆಲ್ಟ್ ಅನ್ನು ಧರಿಸಿ ವಾಹನ ಚಾಲನೆ ಮಾಡಬೇಕು. ವಾಹನಗಳಿಗೆ ವಿಮೆ ಮಾಡಿಸುವುದು ಕಡ್ಡಾಯವಿದ್ದು, ವಿಮೆಯ ಚಾಲ್ತಿ ಅವಧಿ ಮುಕ್ತಾಯವಾಗಿದ್ದರೆ ತಕ್ಷಣವೇ ವಿಮೆಯನ್ನು ಮರು ನವೀಕರಿಸಿ, ಅಪಘಾತದಂತಹ ಸಂದರ್ಭದಲ್ಲಿ ಭರಿಸಲಾಗದ ಆರ್ಥಿಕ ಹೊರೆಯಿಂದ ಸುರಕ್ಷಿತವಾಗಿರಿ ಎಂದು ಮಾಹಿತಿ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸಾರ್ವಜನಿಕರು, ವಿಧ್ಯಾರ್ಥಿಗಳು, ಬಸ್ ಚಾಲಕರು ಹಾಗೂ ಆಟೋ ಚಾಲಕರು ಹಾಗೂ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

 

                                                           “ಜಾಹೀರಾತು”