ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಭಾನುವಾರ ರಾಜ್ಯದಲ್ಲಿ ನಡೆದಂತ ಗ್ರಾಮೀಣ ಅಭಿವೃದ್ಧಿ ಅಧಿಕಾರಿ ಹುದ್ದೆ ನೇಮಕಾತಿ ಪರೀಕ್ಷೆ ನಡೆಸಲಾಯಿತು. ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಒಬ್ಬ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ. ಸಿಸಿಟಿವಿಯ ಮೂಲಕ ಅಕ್ರಮವನ್ನು ಬಯಲಿಗೆಳೆದ ಸಿಬ್ಬಂದಿ.
ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಪತ್ತೆ ಹಚ್ಚಿರುವ ಸಿಬ್ಬಂದಿ, ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಈ ಹಿಂದೆ ಯಾದಗಿರಿ, ಕಲಬುರಗಿಯಲ್ಲಿ ಪಿಎಸ್‌ಐ, ಎಫ್‌ಡಿಎ ಪರೀಕ್ಷೆಯಲ್ಲೂ ಹೀಗೆ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ್ದು ಬೆಳಕಿಗೆ ಬಂದು ಭಾರೀ ಸುದ್ದಿಯಾಗಿತ್ತು. ಅದಾದ ಬಳಿಕ ಇಂಥ ಅಕ್ರಮ ತಡೆಯಲು ಸರ್ಕಾರ ನಾನಾ ಕ್ರಮ ಕೈಗೊಂಡಿತ್ತು . ಅದರ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ. ಭಾನುವಾರ ಪರೀಕ್ಷೆ ನಡೆಯುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಅಭ್ಯರ್ಥಿ ಬ್ಲೂಟೂತ್ ಸಾಧನ ಬಳಸಿ ಅಕ್ರಮ ಮಾಡುತ್ತಿರುವುದನ್ನು ಸಿಸಿ ಕ್ಯಾಮೆರಾ ಕಂಟ್ರೋಲ್ ರೂಮ್‌ನಲ್ಲಿ ಕೂತು ವೀಕ್ಷಿಸುತ್ತಿದ್ದ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕೊಠಡಿಗೆ ತೆರಳಿ ಆತನನ್ನು ವಿಚಾರಣೆ ನಡೆಸಲು ಮುಂದಾದಾಗ, ಆತ ನೆಪ ಹೇಳಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನನ್ನು ಹಿಡಿದುಕೊಂಡ ಸಿಬ್ಬಂದಿ, ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!