ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ
ಶಿವಮೊಗ್ಗ: ದಿನಾಂಕ:25-12-2024 ರಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮ ಗ್ರಾಮ ವಾಸಿ ಮಹಿಳೆಯೊಬ್ಬರ ಮನೆಯ ಮೇಲ್ಚಾವಣಿಯ ಖಾಲಿ ಜಾಗದಿಂದ ಮನೆಯ ಒಳಗೆ ಬಂದು, ಬೀರುವಿನ ಪಕ್ಕದಲ್ಲಿ ಇಟ್ಟಿದ್ದ ಬ್ಯಾಗ್ ನ ಒಳಗಿದ್ದ ಕೀಯಿಂದ ಬೀರುವನ್ನು ತೆಗೆದು ಅದರಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣ ಮತ್ತು ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಠಾಣಾ ಗುನ್ನೆ ಸಂಖ್ಯೆ: 0302/2024 ಕಲಂ 305(ಎ) ಬಿಎನ್ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು.
ಪ್ರಕರರಣದಲ್ಲಿ ಕಳುವಾದ ಮಾಲು ಹಾಗೂ ಆರೋಪಿತರ ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ. ಕೆ. ಶಿವಮೊಗ್ಗ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ. ಜಿ. ಕಾರಿಯಪ್ಪ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕರಾದ ಕೇಶವ ಕೆ.ಇ ಶಿಕಾರಿಪುರ ಉಪ ವಿಭಾಗರವರ ಮೇಲ್ವಿಚಾರಣೆಯಲ್ಲಿ, ಆರ್. ಆರ್. ಪಾಟೀಲ್, ಪಿ.ಐ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ, ರವರ ನೇತೃತ್ವದಲ್ಲಿ, ಶೋಭಾರಾಣಿ ಪಿಎಸ್ಐ ಮತ್ತು ಶ್ರೀ ಅಕ್ಬರ್ ಮುಲ್ಲಾ ಪಿಎಸ್ಐ ಹಾಗೂ ಸಿಬ್ಬಂಧಿಗಳಾದ ಸಿಹೆಚ್ಸಿ ರವರಾದ ನಾಗರಾಜ್, ರಾಘವೇಂದ್ರ, ಸಿಪಿಸಿರವರಾದ ಪ್ರಶಾಂತ್, ಹಜರತ್ ಅಲಿ, ಸಿಪಿಸಿ ರವರಾದ ಜಾಫರ್, ಶೇಖರ್ ರವರನ್ನು ಒಳಗೊಂಡ ವಿಶೇಷ ಸದರಿ ತನಿಖಾ ತಂಡವು.
ಈ ದಿನ ದಿನಾಂಕ: 03-01-2025 ರಂದು ಪ್ರಕರಣದ ಆರೋಪಿ ಶಿವರಾಜ ಪಿ.ಎಸ್ @ ಶಿವು, 28 ವರ್ಷ, ಸಾಲೂರು ಬೀದಿ ಚುರ್ಚಗುಂಡಿ ಗ್ರಾಮ, ಶಿಕಾರಿಪುರ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ಈತನಿಂದ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 6,30,000/- ರೂಗಳ 90.4 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಮತ್ತು ಅಂದಾಜು ಮೌಲ್ಯ 6,000/- ರೂಗಳ 60 ಗ್ರಾಂ ತೂಕದ ಬೆಳ್ಳಿಯ ಆಭರಣಗಳನ್ನು ಹಾಗು ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ 80,000/- ರೂಗಳ ಹಿರೋ ಹೆಚ್.ಎಫ್.ಡಿಲೇಕ್ಸ್ ಬೈಕ್ ಸೇರಿ ಒಟ್ಟು ಅಂದಾಜು ಮೌಲ್ಯ 7,16,000/- ರೂಗಳ ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ ಎಂದು ತಿಳಿಸಿದರು.


More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…