ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ
ಸ್ವಾಮಿ ವಿವೇಕಾನಂದರವರ 162ನೇ ಜನ್ಮ ದಿನಾಚರಣೆಯ ಪ್ರಯುಕ್ತ “ ಯುವಕರು ಆಧುನಿಕ ಸಿದ್ಧಾಂತಗಳಿಗಿಂತ ಸಾಂಪ್ರದಾಯಿಕ ಮೌಲ್ಯಗಳಿಗೆ ಆದ್ಯತೆ ನೀಡಬೇಕೆ?” ಎಂಬ ವಿಷಯದ ಕುರಿತಾಗಿ ಅಂತರ ಪದವಿ ಕಾಲೇಜು ಮಟ್ಟದ ಚರ್ಚಾ ಸ್ಪರ್ಧೆ ಕಾರ್ಯಕ್ರಮವನ್ನು ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ, ಸ್ವಾಮಿ ವಿವೇಕಾನಂದ ಯೂಥ ಫೌಂಡೇಶನ್ ಮತ್ತು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 10.01.2025ರಂದು ಕುವೆಂಪು ವೇದಿಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ನೆಹರು ಯುವ ಕೇಂದ್ರದ, ಜಿಲ್ಲಾ ಯುವ ಅಧಿಕಾರಿ ಶ್ರೀ. ಉಲ್ಲಾಸ್ ಕೆ.ಟಿ.ಕೆ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ. ಕೆ.ಪಿ ಪುಟ್ಟಸ್ವಾಮಿ ರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ, ಶ್ರೀ. ಟಿ.ಪಿ. ನಾಗರಾಜ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಮಧು. ಜಿ ಮತ್ತು ವಿವೇಕಾನಂದ ಫೌಂಡೇಶನ್ನ ರಾಜೇಶ್ ,ಸುನೀಲ್, ಕವಿತಾ, ಡೇವಿಡ್, ಪ್ರದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಉಪನ್ಯಾಸಕರಾದ ಶ್ರೀ. ಸಂದೇಶ್ ನಾಡಿಗೆ ಮತ್ತು ಸವಿತಾ ಎನ್. ರಾವ್ ಆಗಮಿಸಿದ್ದರು.


More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…