City Rounds News

Kannada News Website

ಸಂಚಾರ ಪೊಲೀಸ್ ಇಲಾಖೆಯಿಂದ: ಶಾಲಾ ಮಕ್ಕಳಿಗೆ ಕಾನೂನಿನ ಅರಿವಿನ ಪಾಠ..!

ಶಿವಮೊಗ್ಗ:ಸಿಟಿ ರೌಂಡ್ಸ್ ನ್ಯೂಸ್ 
ಅಣ್ಣಪ್ಪ.ಎಂ

ಭದ್ರಾವತಿ: ದಿನಾಂಕಃ 08-02-2025 ರಂದು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ, ಶಾಂತಲಾ ರವರು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ, ಭದ್ರಾವತಿಯ ಜೆ.ಟಿ.ಎಸ್ (ಜೂನಿಯರ್ ಟೆಕ್ನಿಕಲ್ ಸ್ಕೂಲ್) ಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ವಿಧ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು ಹಾಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಮಕ್ಕಳು ತಮ್ಮ ಸುರಕ್ಷತೆಗಾಗಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು, ಸಾಮಾಜಿಕ ಜಾಲತಾಣದ ಸುರಕ್ಷಿತ ಬಳಕೆ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ, ತುರ್ತು ಮತ್ತು ಅಗತ್ಯ ಸಂದರ್ಭದಲ್ಲಿ ERSS -112 ಸಹಾಯವಾಣಿ ಬಳಕೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಜೆ.ಟಿ.ಎಸ್ ಶಾಲೆಯ ವಿಧ್ಯಾರ್ಥಿಗಳು ಮತ್ತು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.