City Rounds News

Kannada News Website

23 ಬೇಡಿಕೆಗಳನ್ನು ಈಡೇರಿಸುವಂತೆ: 4ನೇ ದಿನಕ್ಕೆ ಕಾಲಿಟ್ಟ ಎರಡನೇ ಹಂತದ, ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ..!

ಶಿವಮೊಗ್ಗ:ಸಿಟಿ ರೌಂಡ್ಸ್ ನ್ಯೂಸ್ 
ಅಣ್ಣಪ್ಪ. ಎಂ 

 

ಶಿವಮೊಗ್ಗ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳನ್ನು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಿನಾಂಕ 26- 09-2024 ರಿಂದ 03- 10- 2024 ರವರೆಗೆ ರಾಜ್ಯದ್ಯಂತ ಮುಷ್ಕರ ನಡೆಸಿದ ಕಾರಣ ದಿನಾಂಕ 03-10-2024 ರಂದು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ಅದರಂತೆ ಸದರಿ ದಿನದಿಂದಲೇ ರಾಜ್ಯ ವ್ಯಾಪ್ತಿ ಮುಷ್ಕರವನ್ನು ಹಿಂಪಡೆಯಲಾಗಿತ್ತು. ತದನಂತರ ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದ ಕಾರಣ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಹೆಚ್ಚಿದ ಕಾರ್ಯದ ಒತ್ತಡ ಉಂಟಾಗಿತ್ತು. ಆದ್ದರಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ದಿನಾಂಕ 10-02- 2025 ರಂದು ಎರಡನೇ ಹಂತದ ಮುಷ್ಕರವನ್ನು ಶಿವಮೊಗ್ಗದ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ 23 ಬೇಡಿಕೆಗಳು ಯಾವುವು.?

1) ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ,2) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ,3) ಸೇವಾ ವಿಷಯಗಳು ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ, 4) ಅಂತರ್ ಜಿಲ್ಲಾ ವರ್ಗಾವಣೆಯ ಕೆ. ಸಿ.ಎಸ್. ಆರ್ ನಿಯಮ 16ಎ ರ ಉಪಕಂಡ 2ನ್ನು ಮರು ಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿಯನ್ನು ರಚಿಸುವ ಬಗ್ಗೆ, 5) ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಕಾತೇದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ವಾರಸುದಾರರ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಮತ್ತು ಇತರೆ ದಾಖಲೆಗಳಿಲ್ಲದೇ ಭೌತಿ ಖಾತೆ ದಾಖಲಿಸುವಂತೆ ಇ- ಪೌತಿ ಖಾತ ಆಂದೋಲನ ಚಾಲನೆ ನೀಡುತ್ತಿರುವುದನ್ನು ಕೈ ಬಿಡುವಂತೆ ಕೋರಿ,6) ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಈ ಕೂಡಲೇ ಹಿಂಪಡೆಯುವ ಬಗ್ಗೆ,7) ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡುವ ಬಗ್ಗೆ, 8) ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವ ಹಾಲಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂಗಳ ಪರಿಹಾರ ಮಂಜೂರು ಮಾಡುವ ಬಗ್ಗೆ, 9) ಮಾತೃ ಇಲಾಖೆಯ ಕೆಲಸದೊಂದಿಗೆ ಅತಿವೃಷ್ಟಿ ಅನಾವೃಷ್ಟಿ ಇನ್ನಿತರ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ , ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿರುವಂತೆ 3000/-ರೂಗಳನ್ನು ಆಪತ್ತಿನ ಭತ್ಯೆ (ರಿಸ್ಕ್ ಅಲೊಯನಸ್) ನೀಡುವ ಬಗ್ಗೆ, 10) ಪೊಲೀಸ್ ಇಲಾಖೆಯಲ್ಲಿ ಇರುವಂತೆ ನೂರಾರು ಕೆಲಸಗಳನ್ನು ನಿರ್ವಹಿಸುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರನೊಳ್ಳಗೊಂಡಂತೆ ಎಲ್ಲಾ ನೌಕರರಿಗೆ ಒಂದು ತಿಂಗಳ ವೇತನವನ್ನು ಹೆಚ್ಚುವರಿ ಮಾಡಿ ಆದೇಶಿಸುವ ಬಗ್ಗೆ, 11) ಪ್ರಮಾಣ ಭಕ್ತಿ ದರವನ್ನು 500/-ರೂಗಳಿಂದ 5000/-ರೂಗಳಿಗೆ ಹೆಚ್ಚುವರಿ ಮಾಡುವ ಬಗ್ಗೆ, 12) ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸುವ ಬಗ್ಗೆ, 13) ಮನೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯನ್ನು ಮಾತ್ರ ನೀಡುವ ಜವಾಬ್ದಾರಿ ನಿರ್ವಹಿಸುವಂತೆ ಆದೇಶಿಸುವ ಬಗ್ಗೆ, 14) ಕ್ಷೇತ್ರ ಮಟ್ಟದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕಚೇರಿಗಳಿಗೆ ನಿಯೋಜಿಸಿಕೊಂಡಿರುವ ಪ್ರಕರಣಗಳಲ್ಲಿ ಅವರುಗಳ ಮೂಲ ಹುದ್ದೆಗಳಿಗೆ ಬಿಡುಗಡೆಗೊಳಿಸಲು ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆ ನಂತರವೂ ಸಹ ಕ್ಷೇತ್ರ ಮಟ್ಟದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕಚೇರಿ ನಿಯೋಜನೆಯಿಂದ ಬಿಡುಗಡೆಗೊಳಿಸದೆ ಇರುವ ಪ್ರಕರಣಗಳಲ್ಲಿ ಸಂಬಂಧಿಸಿದವರ ವಿರುದ್ಧ ಸರ್ಕಾರದ ಸುತ್ತೋಲೆಯಂತೆ ಕ್ರಮ ಜರುಗಿಸುವ ಬಗ್ಗೆ, 15) ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಂತೆ ಹಾಗೂ ಕಚೇರಿ ಅವಧಿಯನ್ನು ಹೊರತುಪಡಿಸಿ ಸಭೆ/ವರ್ಚುವಲ್ ಸಭೆಗಳನ್ನು ನಡೆಸಿದಂತೆ ಸರ್ಕಾರವು ಸುತ್ತೋಲೆಯನ್ನು ವರ್ಣಿಸಿದ ನಂತರವೂ ಕೂಡ ಕೆಲವು ಜಿಲ್ಲೆಗಳಲ್ಲಿ ಸರ್ಕಾರದ ಆದೇಶಗಳನ್ನು ಉಲ್ಲಂಘಿಸುತ್ತಿರುವವರ ಬಗ್ಗೆ ಶಿಸ್ತು ಕ್ರಮ ಜರುಗಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ, 16) ಸುಮಾರು 50 ವರ್ಷಗಳ ಹಿಂದಿನ ಕಾಲದ ಕಚೇರಿಯ ಸಿಬ್ಬಂದಿ ದ್ವಿ.ದ.ಸಾ/ಪ್ರ.ದ.ಸ/ ಶಿರಸ್ತೆದಾರ್ಗಳ ಹುದ್ದೆಗಳನ್ನು ಹಾಗೂ ಕ್ಷೇತ್ರ ಮಟ್ಟದಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ವೃತ್ತಗಳನ್ನು/ಹೋಬಳಿಗಳನ್ನು ಜನಸಂಖ್ಯೆಗೆ ಅನುಗುಣವಾಗಿ ಪರಿಷ್ಕರಿಸಿ ಪುನರ್ ವಿಂಗಡಣೆ ಮಾಡಿ ಹೆಚ್ಚುವರಿ ಹುದ್ದೆಗಳನ್ನು ಸೃಜಿಸುವ ಬಗ್ಗೆ,17) ವಂಶವೃಕ್ಷ/ ಜಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ. ಎಫ್.ಐ.ಆರ್ ದಾಖಲಿಸುತ್ತಿರುವುದನ್ನು ನಿಲ್ಲಿಸಿ, ತಪ್ಪು ಮಾಹಿತಿ ನೀಡುವ ಅರ್ಜಿದಾರರನ್ನೇ ನೇರಳೆಗಾರರನ್ನಾಗಿ ಪ್ರಕರಣ ದಾಖಲಿಸುವ ಬಗ್ಗೆ ಇಲಾಖೆಯ ಮುಖ್ಯಸ್ಥರಿಗೆ ಸೂಕ್ತ ಆದೇಶ ನೀಡುವ ಬಗ್ಗೆ, 18) ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ/ ತೋಟಗಾರಿಕೆ ಇಲಾಖೆಗೆ ಕಾರ್ಯನಿರ್ವಹಿಸುವಂತೆ ಆದೇಶಿಸುವ ಬಗ್ಗೆ, 19) ಮುಟೇಶನ್ ಅವಧಿ ದಿನವನ್ನು ವಿಸ್ತರಣೆ ಮಾಡುವ ಬಗ್ಗೆ, 20) ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಸೂಕ್ತ ಆದೇಶ ನೀಡುವ ಬಗ್ಗೆ, 21) ಗ್ರಾಮ ಆಡಳಿತ ಅಧಿಕಾರಿಗಳ ಜಾಬ್ ಚಾರ್ಟ್ ನಿಗದಿಪಡಿಸುವ ಬಗ್ಗೆ,22) ದಪ್ತೆರ್ ಹಾಗೂ ಜಮಾ ಬಂದಿಯನ್ನು ರದ್ದು ಪಡಿಸುವ ಬಗ್ಗೆ, 23) ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸುವ ವಿಚಾರದ ಸದರಿ ವೃಂದದ ನೌಕರರ ಬಹು ವರ್ಷದ ಬೇಡಿಕೆಯನ್ನು ಆದ್ಯತೆಯಾಗಿ ಪರಿಗಣಿಸಿ ಈಡೇರಿಸುವ ಬಗ್ಗೆ. ಮೇಲ್ಕಂಡಂತೆ ಎಲ್ಲಾ ಬೇಡಿಕೆಗಳನ್ನು ಈಡೇರುವವರೆಗೆ ದಿನಾಂಕ 10 2 2025 ರಿಂದ ಎಲ್ಲಾ ಬಗೆಯ ಮೊಬೈಲ್ ಆಫ್ ಹಾಗೂ ವೆಬ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸಿ ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟದಿಂದ ಸಾರ್ವಜನಿಕರ ಕೆಲಸಗಳಿಗೆ ಯಾವುದೇ ರೀತಿಯ ಸಮಸ್ಯೆಗಳು ಬಾರದಂತೆ ರಾಜ್ಯ ಸರ್ಕಾರ ಕಾನೂನು ನಿಯಮದಂತೆ ಕ್ರಮ ಕೈಗೊಂಡು. ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರವನ್ನು ಕೈ ಬಿಡುವುದರ ಮೂಲಕ.ಸಾರ್ವಜನಿಕರಿಗೆ ಹಾಗೂ ರೈತರಿಗೆ ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಹಾಗೂ ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಹಲವಾರು ಸಾರ್ವಜನಿಕರ ಕೆಲಸಗಳಿಗೆ ಸಮಸ್ಯೆ ಬಾರದಂತೆ ರಾಜ್ಯ ಸರ್ಕಾರ. ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳ ಪರವಾಗಿ ಸಾರ್ವಜನಿಕರು ಹಾಗೂ ಸಿಟಿ ರೌಂಡ್ಸ್ ಪತ್ರಿಕೆಯ ಬಳಗದಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ.