ಶಿವಮೊಗ್ಗ:ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ: ಭದ್ರಾವತಿಯ ಸೀಗೆಬಾಗಿ ವ್ಯಾಪ್ತಿಯಲ್ಲಿ ಭದ್ರಾ ನದಿಯ ಒಡಲಿನಲ್ಲಿ ರಾತ್ರಿ ಸಮಯದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಅದನ್ನೂ ರೈಡ್ ಮಾಡೋಕೆ ಹೋದ ಶಿವಮೊಗ್ಗದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಾಮಾಣಿಕ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂಎಲ್ಎ ಸಂಗಮೇಶ್ ಅವರ ಮಗ ಬಸವೇಶ್ ಅವರ ಮೇಲೆ ಕಾನೂನು ಕ್ರಮ ಹಾಗು ಅಕ್ರಮ ಮರಳುಗಾರಿಕೆ ಮಾಡುತ್ತಿದ್ದ ಅಪರಾಧಿಗಳಿಗೆ/ಅವರಿಗೆ ಬಲವಾಗಿ ಶ್ರೀರಕ್ಷೆಯಾಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅಂದಿನ ಘಟನೆ ಸಮಯದಲ್ಲಿ ಅಧಿಕಾರಿಯ ಕರೆಗೆ ಉತ್ತರಿಸಿದ,ಸ್ಪಂದಿಸದ ಮತ್ತು ಕುಮ್ಮಕ್ಕು ನೀಡುವ ವರ್ತನೆ ತೋರಿದ ಪೊಲೀಸ್ ಅಧಿಕಾರಿಗಳ ಮೇಲೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ನೀಡಲಾಯಿತು ಇದೇ ವೇಳೆ ಇದು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಈ ತನಿಖೆಯನ್ನು ಭದ್ರಾವತಿ ಬಿಟ್ಟು ಹೊರಗಿನ ಠಾಣೆಗೆ ವರ್ಗಯಿಸಬೇಕೆಂದು ಮನವಿಯಲ್ಲಿ ತಿಳಿಸುತ್ತಾ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕೆ ಆರ್ ಎಸ್ ಪಕ್ಷದ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾದ ದಯಾನಂದ ಬಿ ಎಸ್, ಶಿವಮೊಗ್ಗ ಜಿಲ್ಲಾಧ್ಯಕ್ಷರು ಎಸ್ ಕೆ ಪ್ರಭು, ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್, ನಿರಂಜನ್ ಮುಂತಾದವರು ಹಾಜರಿದ್ದರು.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ