ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ: ರಾಜ್ಯದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕಕರದ ಹಿನ್ನಲೆ, ಕಂದಾಯ ಆಯುಕ್ತರು, ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಬೆಂಗಳೂರು ರವರು ಕರ್ನಾಟಕ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತು ಆದಾಯ ಪ್ರಮಾಣ ಪತ್ರಗಳ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ಒಳಗೊಂಡಂತೆ ಎಜೆಎಸ್‍ಕೆ ದತ್ತಾಂಶ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ನಿಂದ ರಾಜಸ್ವ ನಿರೀಕ್ಷಕರವರ ಲಾಗಿನ್ ಗೆ ವರ್ಗಾಯಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ರಾಜಸ್ವ ನಿರೀಕ್ಷಕರವರ ಲಾಗಿನ್ನಲ್ಲಿ ಸ್ವೀಕೃತವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರಾಜಸ್ವ ನಿರೀಕ್ಷಕರು ಕ್ಷೇತ್ರ ಪರಿಶೀಲನೆ ಮಾಡಬೇಕಾಗಿರುತ್ತದೆ. ಎಜೆಎಸ್‍ಕೆ ದತ್ತಾಂಶದಲ್ಲಿನ ಸದರಿ ಬದಲಾವಣೆಗಳನ್ನು ಸದ್ಭಳಕೆ ಮಾಡಿಕೊಂಡು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ವಿತರಿಸಿ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಲು ಕಂದಾಯ ಆಯುಕ್ತರು ತಿಳಿಸಿದ್ದಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!