City Rounds News

Kannada News Website

ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್ 

ಅಣ್ಣಪ್ಪ. ಎಂ 

ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ..!

 

ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2025ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಫೆ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ. ಫೆ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ. ಫೆ.25 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ, ಫೆ.28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.