ಶಿವಮೊಗ್ಗ ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಭದ್ರಾವತಿ: 21-02-2025, ಭದ್ರಾವತಿ ನಿವಾಸಿ ಆದ ರೌಡಿಶೀಟರ್ ಗುಂಡ ಅಲಿಯಾಸ್ ರವಿ ಎಂಬ ಅಪರಾಧಿಯನ್ನು ಭದ್ರಾವತಿ ನಗರದಲ್ಲಿ ಪ್ರಕರಣದ ವಿಚಾರವಾಗಿ ಬಂಧಿಸಲು ಹೋದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಅಪರಾಧಿ ಗುಂಡ ಅಲಿಯಾಸ್ ರವಿ ಹಲ್ಲೆ ಮಾಡಲು ಮುಂದಾದಾಗ, ಆತ್ಮ ರಕ್ಷಣೆಗಾಗಿ ಪೊಲೀಸ್ ಅಧಿಕಾರಿ ಕೃಷ್ಣ ಎಂಬವರು. ಅಪರಾಧಿ ಗುಂಡ ಅಲಿಯಾಸ್ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಅಪರಾಧಿ ಗುಂಡ ಅಲಿಯಾಸ್ ರವಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗುಂಡ ಅಲಿಯಾಸ್ ರವಿ ಎಂಬಾತನು ನಾಲ್ಕು ಪ್ರಕರಣದಲ್ಲಿ ಕಾನೂನಿಗೆ ಬೇಕಾದಂತಹ ಅಪರಾಧಿಯಾಗಿದ್ದು . ಇವನನ್ನು ಬಂಧಿಸುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ