ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ: ದಿನಾಂಕ 10/03/2025, ನಾಡು ಕಂಡ ಧೀಮಂತ ರಾಜಕಾರಣಿ,ಬಡವರ ಬಂಧು, ಅಲ್ಪಸಂಖ್ಯಾತರ, ದಲಿತರು ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ ಜನಪರ ನಾಯಕ ದಿಟ್ಟ ಹೋರಾಟಗಾರ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಪ್ರತಿಮೆಯನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಬೇಕೆಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರಾದ ಆರ್ ಮೋಹನ್ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಿರುವ ಬಗ್ಗೆ ಮನವಿ ತಿಳಿಸಿದ್ದಾರೆ.
ಮಾನ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಹಿಂದೆ ಇಂಧನ ಸಚಿವರಾಗಿದ್ದಾಗ ಮೆಗನ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿದ್ಯುತ್ ವಿತರಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಈ ಬಗ್ಗೆ ಪ್ರಾಸ್ತಾಪಿಸಿದರು. ಆದರೆ ಇದುವರೆಗೂ ಈ ಆಶಯ ಈಡೇರಿಲ್ಲ.
ಬಂಗಾರಪ್ಪನವರ ಮಗ ಮಧು ಬಂಗಾರಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈ ಸಂದರ್ಭದಲ್ಲಿ ಇದಕ್ಕೆ ಮತ್ತಷ್ಟು ಮಹತ್ವ ಬಂದಂತಾಗುತ್ತದೆ. ಜಿಲ್ಲೆಯ ಅಭಿವೃದ್ಧಿಯಲ್ಲಿ ಬಂಗಾರಪ್ಪನವರ ಪಾತ್ರ ಮಹತ್ವದ್ದಾಗಿದೆ, ರಾಜ್ಯದ ಮುಖ್ಯಮಂತ್ರಿ ಯಾಗಿ ಅವರು ಜಾರಿಗೊಳಿಸಿದೆ ಅಕ್ಷಯ, ಆಶ್ರಯ, ಆರಾಧ್ಯ, ಮತ್ತಿ ತರ ಜನಪರ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.
ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ ಅಸ್ತು ಸೇರಿದಂತೆ ಅನೇಕಾನೇಕ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳು ನಡೆದಿವೆ. ಸಾರ್ವಜನಿಕರ ಬದುಕಿನಲ್ಲಿ ಆದರ್ಶ ಎನಿಸಿಕೊಂಡವರ ಪ್ರತಿಮೆ ಸ್ಥಾಪಿಸಿ ಗೌರವ ಸಲ್ಲಿಸುವ ರೂಢಿ ಇದೆ. ಅಂತೆಯೇ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿದಲ್ಲಿ ಮಹತ್ವ ಬರುತ್ತದೆ ಹಾಗೂ ಬಂಗಾರಪ್ಪನವರಿಗೆ ಗೌರವ ಸಲ್ಲಿಸು ವಂತ್ತಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಆರ್. ಮೋಹನ್ ತಿಳಿಸಿದ್ದಾರೆ.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…