ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ : ಸಹಕಾರ ಇಲಾಖೆಯು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ-1960 ಕಲಂ 13 ರಂತೆ ನೋಂದಣಿಯಾದ ಪ್ರತಿಯೊಂದು ಸಂಘ-ಸಂಸ್ಥೆಗಳು ಪ್ರತಿವರ್ಷ ನವೀಕರಣಗೊಳಿಸಿಕೊಳ್ಳುವುದು ಕಡ್ಡಾಯ. ಅನೇಕ ಸಂಘ-ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ನವೀಕರಿಸದೇ ಇರುವುದರಿಂದ ಇಂತಹ ಸಂಘ-ಸಂಸ್ಥೆಗಳ ಹಿತದೃಷ್ಠಿಯಿಂದ ಕೂಡಲೇ ಪ್ರತಿ ವರ್ಷಕ್ಕೆ ರೂ. 3,000/-ಗಳ ದಂಡ ಪಾವತಿಸಿ ನವೀಕರಿಸಿಕೊಳ್ಳುವುದು ಎಂದು ತಿಳಿಸಿದ್ದಾರೆ.
ಇಂತಹ ಸಂಘ ಸಂಸ್ಥೆಗಳು ದಿ: 31/12/2025 ರೊಳಗಾಗಿ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಸೂಕ್ತ ದಾಖಲೆ ಮತ್ತು ಮಾಹಿತಿಗಳೊಂದಿಗೆ ಫೈಲಿಂಗ್ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…