ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ
ಶಿಕಾರಿಪುರ : ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಜಿಲ್ಲಾ, ಮಾನ್ಯ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಹೆಚ್ಚುವರಿ ಪೊಲೀಸ್ ಅನಿಲ್ ಕುಮಾರ್ ಭುಮರಡ್ಡಿ, ಕಾರಿಯಪ್ಪ ಎ ಜಿ. ರವರ ಮಾರ್ಗದರ್ಶನದಲ್ಲಿ, ಕೃಷ್ಣಮೂರ್ತಿ ಕೆ ಪೊಲೀಸ್ ಉಪಾಧೀಕ್ಷಕರು ಸಿಇಎನ್ ಕ್ರೈಂ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ.
ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ 1) ಮೊಹಮ್ಮದ್ ಮುಸೇಬ್, 23 ವರ್ಷ, ಮಲ್ಲಾಪುರ ಗ್ರಾಮ, ಶಿಕಾರಿಪುರ 2) ಹಜರತ್ ಉಸ್ಮಾನ್, 26 ವರ್ಷ, ಮಲ್ಲಾಪುರ ಗ್ರಾಮ, ಶಿಕಾರಿಪುರ 3) ಸಲ್ಮಾನ್ ಇ, 28 ವರ್ಷ, ಅಣ್ಣಾನಗರ 07ನೇ ಕ್ರಾಸ್, ಶಿವಮೊಗ್ಗ, 4) ಮೊಹಮ್ಮದ್ ಕೈಫ್, 21 ವರ್ಷ, ಜಟ್ಪಟ್ ನಗರ, ಶಿಕಾರಿಪುರ ಟೌನ್, ಇವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 70,000/- ರೂಗಳ 2 ಕೆಜಿ 52 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಡಿಜೈರ್ ಕಾರ್ ಮತ್ತು ಹೊಂಡಾ ಶೈನ್ ಬೈಕ್ ನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಶಿವಮೊಗ್ಗ ಜಿಲ್ಲೆ ಮಾನ್ಯ ಪೊಲೀಸ್ ಅಧೀಕ್ಷಕರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ. ಎಂದು ತಿಳಿಸಿದ್ದಾರೆ.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…