ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ
ಬೆಂಗಳೂರು: ಬೆಂಗಳೂರಿನಲ್ಲಿ 16 ವರ್ಷದ ಬಾಲಕಿಯ ಮೇಲೆ ತರಬೇತುದಾರ ಹಲವು ಬಾರಿ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬ್ಯಾಡ್ಮಿಂಟನ್ ತರಬೇತುದಾರನಾದ ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬುವನು ತನ್ನ ಹತ್ತಿರ ಬ್ಯಾಡ್ಮಿಂಟನ್ ಕೋಚಿಂಗ್ ಪಡೆಯಲು ಬರುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದು ಈ ವಿಚಾರವನ್ನು ಯಾರಿಗಾದರೂ ತಿಳಿಸಿದಲ್ಲಿ ಕೊಲೆ ಮಾಡುವುದಾಗಿ ಹೇಳಿ ಭಯಪಡಿಸಿ ಈ ಕೃತ್ಯವನ್ನು ಎಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾಗಿರುವ ಈ ಬಾಲಕಿ ಸುಮಾರು ಎರಡು ವರ್ಷದಿಂದ, ಕಾಮುಕ ಕೋಚಿಂಗ್ ಹತ್ತಿರ ಬ್ಯಾಡ್ಮಿಂಟನ್ ಕೋಚಿಂಗ್ ಪಡೆಯಲು ಬರುತ್ತಿದ್ದಳು ಎಂದು ಬಾಲಕಿಯ ಪೋಷಕರು ತಿಳಿಸಿದ್ದಾರೆ.
ಕಾಮುಕ ತರಬೇತಿದಾರ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದಲ್ಲದೆ ಬಾಲಕಿಯ ನಗ್ನ ಫೋಟೋ ವಿಡಿಯೋಗಳನ್ನು ಚಿತ್ರಿಕರಿಸಿ ಬಾಲಕಿಯನ್ನು ಎದುರಿಸುತ್ತಿದ್ದನಂತೆ. ಕಾಮುಕ ತರಬೇತುದಾರನಿಗೆ, ಅಜ್ಜಿಯ ಮೊಬೈಲ್ ನಿಂದ ಬಾಲಕಿ ತನ್ನ ನಗ್ನ ಫೋಟೋ ವಿಡಿಯೋ ಶೇರ್ ಮಾಡಿದ್ದಾಳೆ, ಅಜ್ಜಿಗೆ ಈ ವಿಚಾರ ತಿಳಿದ ನಂತರ ಅಜ್ಜಿ ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ ಪೋಷಕರು ಬಾಲಕಿಯನ್ನು ವಿಚಾರಣೆ ಮಾಡಿದಾಗ ತರಬೇತುದಾರನಿಂದ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದಾಳೆ. ಪೋಷಕರು ಹುಳಿಮಾವು ಪೊಲೀಸ್ ಠಾಣೆಗೆ ಈ ವಿಚಾರವಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಆರೋಪಿ ಕಾಮುಕ ಸುರೇಶ್ ಬಾಲಾಜಿಯನ್ನು ಪೊಲೀಸರು ಬಂಧಿಸಿದ್ದಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!