ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ : ನಾಗರೀಕ ಬಂದೂಕು ತರಬೇತಿ ಶಿಬಿರ..!

ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್ 

ಅಣ್ಣಪ್ಪ . ಎಂ

 

 

 

 

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ, ದಿನಾಂಕ: 18-04-2025 ರಿಂದ ದಿನಾಂಕ: 27-04-2025 ರವರೆಗೆ ಶಿವಮೊಗ್ಗ ನಗರದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಶಿಭಿರದಲ್ಲಿ ಭಾಗವಹಿಸಲು ಇಚ್ಛೆಯುಳ್ಳ ಆಸಕ್ತ ನಾಗರೀಕರು ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಅಥವಾ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ಸಾಗರ ರಸ್ತೆ, ಶಿವಮೊಗ್ಗ ಕಛೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ಸದರಿ ಅರ್ಜಿಯೊಂದಿಗೆ ಇತ್ತೀಚಿನ 02 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ನ ನಕಲು ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ದಿನಾಂಕ: 17-04-2025 ರೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ.