ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ
ಶಿವಮೊಗ್ಗ : ದಿನಾಂಕಃ 20-09-2022 ರಂದು ದುಮ್ಮಳ್ಳಿ ಗ್ರಾಮ ನಿವಾಸಿಯಾದ ಸುಮಾರು 36 ವರ್ಷದ ವಯಸ್ಸಿನ ಕರುಣಾಕರ ಎಂಬಾತನು ತನ್ನ ಹೆಂಡತಿಯಾದ ದುಮ್ಮಳ್ಳಿ ಗ್ರಾಮದ ನಿವಾಸಿಯಾದ, ಸುಮಾರು 27 ವರ್ಷ ವಯಸ್ಸಿನ ಅಮಿತಾ ಎಂಬಾಕೆಯನ್ನು , ವರದಕ್ಷಿಣೆ ವಿಚಾರವಾಗಿ ಹಿಂಸಿಸಿ, ಕೌಟುಂಬಿಕ ಕಿರುಕುಳ ನೀಡಿ, ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುತ್ತಾನೆಂದು ಮೃತೆಯ ತಾಯಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾ ಣೆ ಗುನ್ನೆ ಸಂಖ್ಯೆ 438/2022 ಕಲಂ 304(B), 498(A), 302 ಐಪಿಸಿ ಮತ್ತು ಕಲಂ 3, 4 ಡಿ ಪಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಬಿ ಮಂಜುನಾಥ್. ಪಿ. ಐ ತುಂಗಾನಗರ ಪೊಲೀಸ್ ಠಾಣೆ ರವರು ತನಿಖೆ ನಡೆಸಿದ್ದು, * ಬಾಲರಾಜ್, ಡಿವೈಎಸ್.ಪಿ ಶಿವಮೊಗ್ಗ ಉಪವಿಭಾಗ ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು ಪ್ರಕರಣದ ವಾದ ಮಂಡಿಸಿದ್ದು, ಘನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಪ್ರಕರಣದ ಆರೋಪಿ ಕರುಣಾಕರ ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಶ್ರೀಮತಿ ಪಲ್ಲವಿ ಬಿ.ಆರ್ ರವರು ದಿನಾಂಕ:- 08-04-2025 ರಂದು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ರೂ 1,85,000/- ದಂಡ ವಿಧಿಸಿ ಆದೇಶಿಸಿರುತ್ತಾರೆ ಎಂದು ತಿಳಿಸಿದ್ದಾರೆ.
More Stories
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …
ಯುವ ಪ್ರೇಮಿಗಳೇ ಇವನ ಟಾರ್ಗೆಟ್…. ಮಂಜುನಾಥನಾಯ್ಕ ಇವನ ಹಿಂದಿದೆಯೇ ದೊಡ್ಡ ರಾಬರಿ ಗ್ಯಾಂಗ್ …?
ಜನಪ್ರತಿನಿಧಿಗಳ ಕರೆಗೆ ಅಧಿಕಾರಿಗಳು ಡೋಂಟ್ ಕೇರ್ :ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ರೋಶ..!!