ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ . ಎಂ
ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ 4ನೇ ಕ್ರಾಸ್ ನಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಇದೇ ತಿಂಗಳು ಮೇ 11ನೇ ತಾರೀಕ್ ಭಾನುವಾರದಂದು ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಜಯಂತೋತ್ಸವ ಹಾಗೂ 13ನೇ ವರ್ಷದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ವೇದ,ಬ್ರಹ್ಮ, ಶ್ರೀ ಸುಮುಖ ಭಟ್ಟ ಇವರ ನೇತೃತ್ವದಲ್ಲಿ ಗುರು ಪ್ರಾರ್ಥನೆ, ಫಲ ಪ್ರಾರ್ಥನೆ,ಮಹಾಗಣಪತಿ ಪೂಜೆ, ಪುಣ್ಯ ವಾಚನ, ದೇವ ನಾಂದಿ, ಕಂಕಣ ಬಂಧನ, ಮಂಡಲ ಆರಾಧನಾ ಪೂರ್ವಕ ಹಾಗೂ ಸಾಮೂಹಿಕ ಹೋಮವನ್ನು ಏರ್ಪಡಿಸಲಾಗಿದೆ.
ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, ಸಂಜೆ 6 ರಿಂದ 8 ಗಂಟೆಯವರೆಗೆ ಸಪ್ತಸ್ವರ ಟ್ರಸ್ಟ್ ನ ಚಂದ್ರಶೇಖರ್ ಭಟ್ ಮತ್ತು ತಂಡದವರಿಂದ ಭಕ್ತಿಗೀತೆಗಳ ಸಂಗೀತ ಕಾರ್ಯಕ್ರಮ ಹಾಗೂ ನಮನ ಅಕಾಡೆಮಿ, ದಾವಣಗೆರೆ ಸಂಸ್ಥೆಯ ಕುಮಾರಿ ಹಂಸಿ ಕರಿಂದ ಶ್ರೀ ನರಸಿಂಹ ಸ್ವಾಮಿ ದೇವರ ನವರೂಪದ, ಭರತನಾಟ್ಯ ಕಾರ್ಯಕ್ರಮ ಇರುತ್ತದೆ. 
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಕೆಎಸ್ ಈಶ್ವರಪ್ಪ, ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ಶಾಸಕ ಚನ್ನಬಸಪ್ಪ ,ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ಕುಮಾರ್,ಡಾಕ್ಟರ್ ಧನಂಜಯ್ ಸರ್ಜಿ, ಮಾಜಿ ಪರಿಷತ್ ಸದಸ್ಯ ಎಸ್ ರುದ್ರೇಗೌಡರು, ಸೂಡಾ ಅಧ್ಯಕ್ಷ ಸುಂದರೇಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರವಿ ಪಾಟೀಲ್, ಆರ್ ಬಸವರಾಜ್, ಮುಂತಾದ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ಈ ಪುಣ್ಯ ಕಾರ್ಯಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿಯ ಆಶೀರ್ವಾದಕ್ಕೆ ಪಾತ್ರರಾಗಬೇಕೆಂದು ಆಡಳಿತ ಮಂಡಳಿ ಕೋರಿದೆ. (ಹರಿ ಓಂ)…


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ