ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ.
ಶಿವಮೊಗ್ಗ: ದಿನಾಂಕ: 02-05-2024 ರಂದು ರಾತ್ರಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವಾಸಿಯಾದ ಬಾಲಕೃಷ್ಣನ್.ಕೆ, 50 ವರ್ಷ, ಮೀನು ವ್ಯಾಪಾರ ಕೆಲಸ ವಾಸ ಮೀನುಗಾರರ ಬೀದಿ ಕೆನರಾ ಬ್ಯಾಂಕ್ ಹತ್ತಿರ ಬಿ ಹೆಚ್ ರಸ್ತೆ, ಭದ್ರಾವತಿ ರವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಮೇಲಿನ ಸಿಮೇಂಟ್ ಶೀಟನ್ನು ಒಡೆದು ಒಳ ಪ್ರವೇಶ ಮಾಡಿ ಬೀರು ವಿನಲ್ಲಿದ್ದ ಅಂದಾಜು ಮೌಲ್ಯ 1,02,000/- ರೂ ಬೆಲೆಯ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಠಾಣಾ ಅಪರಾಧ ಸಂಖ್ಯೆ: 0106/2024 ಕಲಂ 331(4), 305 (a) BNS ಕಾಯ್ದೆ ರೀತ್ಯ ಪ್ರಕರಣ ದಾಖಲಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿ ಮತ್ತು ಮಾಲು ಪತ್ತೆ ಬಗ್ಗೆ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಮತ್ತು ಎ. ಜಿ. ಕಾರಿಯಪ್ಪ ರವರ ಮಾರ್ಗದರ್ಶನದಲ್ಲಿ ನಾಗರಾಜ ಡಿವೈಎಸ್ ಪಿ, ಭದ್ರಾವತಿ ಉಪ ವಿಭಾಗ, ಶ್ರೀಶೈಲಕುಮಾರ್ ಸಿ.ಪಿ.ಐ ಭದ್ರಾವತಿ ನಗರ ವೃತ್ತ ರವರ ಮೇಲ್ವಿಚಾರಣೆಯಲ್ಲಿ ಟಿ ರಮೇಶ್, ಪಿ.ಎಸ್.ಐ ನ್ಯೂಟೌನ್ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳಾದ ಟಿ.ಪಿ.ಮಂಜಪ್ಪ ಎ.ಎಸ್.ಐ, ಸಿ.ಹೆಚ್.ಸಿ ನವೀನ್, ಸಿಪಿಸಿ ನಾಗರಾಜ್ ರವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಸದರಿ ತನಿಖಾ ತಂಡವು ಆರೋಪಿಯಾದ ಜೈಕಾಂತ್ ಪಿ, 21 ವರ್ಷ, ಕೆನರಾ ಬ್ಯಾಂಕ್ ಬಳಿ ಮೀನುಗಾರರ ಬೀದಿ ಭದ್ರಾವತಿ ಈತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಸದರಿ ಪ್ರಕಾರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,12,000/- ರೂಗಳ 11 ಗ್ರಾಂ 300 ಮಿಲಿ ತೂಕದ ಬಂಗಾರದ ಅಭರಣ, ಒಂದು ವಾಚ್, 2000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಒಪ್ಪೋ ಮೊಬೈಲ್ ಅನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ ಎಂದು ತಿಳಿಸಿದ್ದಾರೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಪ್ರಶಂಷಿಸಿ ಅಭಿನಂದಿಸಿರುತ್ತಾರೆ ಎಂದು ತಿಳಿಸಿದ್ದಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ