ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ
ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಕೊಡ್ಲಾಪುರ ಗ್ರಾಮ ಪಂಚಾಯಿತಿ ಅಧಿಕಾರಿ ಪುಂಡಲೀಕ ಬೊಮಗೊಂಡ ಮತ್ತು ಬಿಲ್ ಕಲೆಕ್ಟರ್ ಹನುಮಂತರಾಯಪ್ಪ ಈ ಇಬ್ಬರು ಲೋಕಾಯುಕ್ತ ಬಲಗೆ ಸಿಕ್ಕಿಬಿದ್ದ ಭ್ರಷ್ಟ ಲಂಚ ಕೋರರು.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ವೀರನಾಗೇನಹಳ್ಳಿ ಮಜರೆ ವಡ್ಡರಹಟ್ಟಿ ಗ್ರಾಮದ ನಿವಾಸಿಯಾದ ಕೆ.ಎಚ್.ಆನಂದ್ ಕುಮಾರ್ ಎಂಬ ವ್ಯಕ್ತಿಗೆ ಸೇರಿದ್ದ ಆಸ್ತಿಯ ಇ — ಖಾತೆ ಮಾಡಿಕೊಡಲು 500/- ರೂಗಳ ಸರ್ಕಾರಿ ಶುಲ್ಕದ ಜೊತೆಗೆ 6000/- ಸಾವಿರ ರೂ ಲಂಚ ನೀಡುವಂತೆ ಪಂಚಾಯಿತಿ ಅಧಿಕಾರಿ ಹಾಗೂ ಕರ ವಸೂಲಿಗಾರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ದೂರುದಾರ ಕೆ.ಎಚ್.ಆನಂದ್ ಕುಮಾರ್ ಲಂಚದ ಹಣ ಕೊಡಲು ಇಷ್ಟವಿಲ್ಲದೆ ದಿನಾಂಕ:- 09/05/2025 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ ಮೇರೆಗೆ ಪೊಲೀಸ್ ಇನ್ಸ್ಪೆಕ್ಟರ್ ಶಿವರುದ್ರಪ್ಪ ಮೇಟಿ ಯವರ ತಂಡ 03/2025 ಕಲಂ –7(a) ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ 1988 (ತಿದ್ದುಪಡಿ 2018) ರಂತೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡಿದ್ದರು.
ಮಂಗಳವಾರ ಮಧ್ಯಾಹ್ನ 2:30 ರ ಸಮಯದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಪುಂಡಲೀಕ ಬೊಮಗೊಂಡ ಮತ್ತು ಕರ ವಸೂಲಿಗಾರ ಹನುಮಂತರಾಯಪ್ಪ, ದೂರುದಾರ ಕೆ.ಎಚ್.ಆನಂದನಿಂದ 6,500/- ಲಂಚದ ಹಣವನ್ನು ತೆಗೆದುಕೊಳ್ಳುವ ಸಮಯದಲ್ಲಿ ರೆಡ್ ಹ್ಯಾಂಡ್ ಹಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಪಂಚಾಯಿತಿ ಅಧಿಕಾರಿ ಹಾಗೂ ಕರ ವಸೂಲಿಗಾರರನ್ನು ಲೋಕಾಯುಕ್ತ ಪೊಲೀಸರ ತಂಡ ವಶಕ್ಕೆ ಪಡೆದು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ಇಂತಹ ಭ್ರಷ್ಟ ಲಂಚಕೋರ ಗ್ರಾಮ ಪಂಚಾಯಿತಿ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿದ್ದು ಗ್ರಾಮದ ಸಾರ್ವಜನಿಕರಿಂದ ಹಣಕ್ಕಾಗಿ ಬಡವರನ್ನು ಪೀಡಿಸುತ್ತಿರುವುದು ಹಲವಾರು ಗ್ರಾಮ ಪಂಚಾಯಿತಿಗಳಲ್ಲಿ ಕಂಡುಬರುತ್ತಿದ್ದು ಇಂತಹ ಭ್ರಷ್ಟ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಕೆಲಸಿಬ್ಬಂದಿಗಳನ್ನು ಅವರ ಹುದ್ದೆಯಿಂದ ವಜಾಗೊಳಿಸಬೇಕೆಂಬುದು ಹಲವರ ದೂರಾಗಿದೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!