ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ
ಮಂಗಳೂರು: ಮಂಗಳೂರು ಜಿಲ್ಲೆಯ ಇರಾ ಗ್ರಾಮದ ವ್ಯಕ್ತಿಯೊಬ್ಬರಿಗೆ ಮನೆ ನಿರ್ಮಾಣಕ್ಕೆ ಕಟ್ಟಡಕಲ್ಲು ಮಣ್ಣು ತೆಗೆದು ಮನೆ 🏡 ನಿರ್ಮಾಣ ಮಾಡುವುದಕ್ಕಾಗಿ ಅನುಮತಿ ನೀಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರೊಬ್ಬರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಭ್ರಷ್ಟ ಅಧಿಕಾರಿ.

ಉಳ್ಳಾಲ ತಾಲ್ಲೂಕು ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 139 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡ ಕಲ್ಲು ತೆಗೆದು ಮನೆ 🏡 ನಿರ್ಮಾಣ ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 2024 ಅಕ್ಟೋಬರ್ 28 ರಂದು ಅರ್ಜಿ ಸಲ್ಲಿಸಿದ್ದರು.
ಉಳ್ಳಾಲ ತಹಶೀಲ್ದಾರರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ದೂರುದಾರರ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ, ದೃಢಿಕರಣ ಪತ್ರ ನೀಡಬಹುದಾಗಿದೆ ಎಂದು ಸುಮಾರು ಎರಡು ತಿಂಗಳ ಹಿಂದೆಯೇ ವರದಿ ಸಲ್ಲಿಸಿದ್ದರೂ ಕೂಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಲಂಚಕ್ಕಾಗಿ ಅನುಮತಿ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಅರ್ಜಿಯ ಬಗ್ಗೆ ವಿಚಾರಿಸಲು ಪಿರ್ಯಾದಿದಾರರು ಮಂಗಳೂರು ಗಣಿ ಮತ್ತು ಭೂ ಇಲಾಖೆ ಕಚೆೇರಿಗೆ ತೆರಳಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ‘‘ಫೈಲಿಗೆ 50,000 ರೂ. ಲಂಚ ಕೊಟ್ಟರೆ ಮಾತ್ರ ಅನುಪತಿ ಪತ್ರ ನೀಡುತ್ತೇವೆ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.
ಈ ಬಗ್ಗೆ ದೂರುದಾರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರುದಾರರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ರವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಹಾಗೂ ಸಿಬ್ಬಂದಿ ಪ್ರದೀಪ್ ಮೂಲಕ ದೂರುದಾರರಿಂದ, 50,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು (ಪ್ರಭಾರ) ಕುಮಾರಚಂದ್ರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಶಿವಮೊಗ್ಗದಲ್ಲಿ ಇದೇ ರೀತಿ ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಒಬ್ಬರು, ಕೆರೆ ಮಣ್ಣಿನ ಅಕ್ರಮ ದಂಧೆ ನಡೆಸುತ್ತಿರುವಂತ ದಂಧೆ ಕೊರರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ, ಹಾಗೂ ಡ್ರೈಫ್ರೂಟ್ಸ್ ಗಾಗಿ ಸಾವಿರಗಟ್ಟಲೆ ಹಣವನ್ನು ಲೋಕಾಯುಕ್ತರ ಹೆಸರಿನಲ್ಲಿ ಪೀಕುತಿದ್ದಾರೆ ಎಂಬ ಸುದ್ದಿ ಒಂದು ಹರಿದಾಡುತ್ತಿದೆ. 
ಹಾಗೂ ಕೆರೆ ಮಣ್ಣಿನ ಲೂಟಿಯಲ್ಲಿ, ಕೆಲ ಪಂಚಾಯಿತಿ ಪಿಡಿಒ ಗಳು, ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕೆಲವರು, ಹಾಗೂ ಮೈನೆರ್ ಇರಗೇಶನ್ ಇಲಾಖೆಯ ಕೆಲವರು, ಹಾಗೂ ತುಂಗಾ ಮೇಲ್ದಂಡೆ ಯೋಜನೆ ಇಲಾಖೆಯ ಕೆಲವರು, ಶಾಮಿಲ್ ಆಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಕೆಲವರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಕೆಲವರು ಸದ್ಯದಲ್ಲೇ ಲೋಕಾಯುಕ್ತರ ವಶಕ್ಕೆ ಎಂಬ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!