ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ.ಎಂ
ಶಿವಮೊಗ್ಗ: ಮೇ -29 ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ – ಕಾಲೇಜುಗಳಿಗೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ/ಉಪನ್ಯಾಸಕರ ಹುದ್ದೆಗಳಿಗೆ ಜೂನ್ 01 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜೂನ್ 01 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ/ಕಾಲೇಜು, ಮೇಲಿನ ಹನಸವಾಡಿ, ಗೋಂಧಿಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ಪ್ರವೇಶ ಪರೀಕ್ಷೆಗೆ ಜಿಲ್ಲಾ ಕಚೇರಿಯಲ್ಲಿ ಪ್ರವೇಶ ಪತ್ರ ಪಡೆದು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ