City Rounds News

Kannada News Website

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ…!

ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್ 

ಅಣ್ಣಪ್ಪ. ಎಂ 

 

 

ಶಿವಮೊಗ್ಗ : ಜೂನ್.16 – ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಕರ್ನಾಟಕದ ಸೊಸೈಟಿ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು/ಸೊಸೈಟಿಗಳು/ಟ್ರಸ್ಟ್ಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

 

ಖಾಸಗಿ ಕಾಲೇಜುಗಳ ಸ್ಥಾಪಿಸಲು ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್), ಕೃಷಿ, ಬಿ.ಟೆಕ್. ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿಎಸ್ಸಿ (ಹಾರ‍್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್), ಕಮೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್), ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್), ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್), ರೇಷ್ಮೆ ಕೃಷಿ ಪದವಿಯ ವಿಷಯಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

 

ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು ಅಫಿಲಿಯೇಶ್‌ಗಾಗಿ ಕನಿಷ್ಟ ಮಾನದಂಡಗಳನ್ನು (ksnuahs-msacr 2025) www.ushs.edu.in ಜಾಲತಾಣದಲ್ಲಿ ಪ್ರಕಟಿಸಿದೆ. ಅಧಿಸೂಚಿಸಿದ ಮಾನದಂಡಗಳಂತೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ (ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ) ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ಧ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸ ಬಯಸುವ ಸಂಸ್ಥೆಗಳು ಅರ್ಜಿಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

 

ಈ ವಿಶ್ವ ವಿದ್ಯಾಲಯದಲ್ಲಿ ಅಫಿಲಿಯೇಶನ್‌ಗಾಗಿ ಅರ್ಜಿಯನ್ನು ಸಲ್ಲಿಸಲು ಜುಲೈ 07 ಕೊನೆಯ ದಿನವಾಗಿರುತ್ತದೆ. ಸಲ್ಲಿಸಿದ ಅರ್ಜಿಗಳನ್ನು ಆಗಾಗ್ಗೆ ಪರಿಶೀಲಿಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ನಂತರ (KSNUAHS-MSACR 2025) ರ ಪ್ರಕಾರ ಅವುಗಳನ್ನು ಪರೀಶೀಲಿಸಿ ನಿಯಮದಂತೆ ಪ್ರಕ್ರಿಯೆ ನೆಡೆಸಲಾಗುವುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ಕೆ.ಶಿ.ನಾ.ಕೃ.ತೋ.ವಿ.ವಿ. ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.