City Rounds News

Kannada News Website

ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡರ ಖಡಕ್ ಎಚ್ಚರಿಕೆ…!

ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್ 

ಅಣ್ಣಪ್ಪ. ಎಂ 

 

ಶಿವಮೊಗ್ಗ : ದಿನಾಂಕ 02 -07 -2025 ರಂದು ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಂದಾಯ ವಿಭಾಗದ ವಲಯ 2ಕ್ಕೆ ಭೇಟಿ ನೀಡಿ ಕಂದಾಯ ವಿಭಾಗದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಎಚ್ಚರಿಕೆಯನ್ನು ನೀಡಿದರು.

ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಾಗ ಅವರನ್ನು ಗೌರವದಿಂದ ಪ್ರೀತಿಯಿಂದ ಮಾತನಾಡಿಸಬೇಕು. ಅವರ ಸಮಸ್ಯೆಗೆ ಸ್ಪಂದಿಸಬೇಕು ಯಾವುದೇ ರೀತಿಯ ಮನಸ್ಸಿಗೆ ಕಿರಿಕಿರಿ ಉಂಟಾಗದಂತೆ ಸಾರ್ವಜನಿಕರ ಸಮೀಪ ಅಧಿಕಾರಿಗಳಾಗಲಿ ಸಿಬ್ಬಂದಿಗಳಾಗಲಿ ವರ್ತಿಸಬಾರದು ಎಂದು ಎಚ್ಚರಿಕೆ ನೀಡಿದರು.