ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ: ಜುಲೈ 07- ನಗರದ ಶಿವಪ್ಪ ನಾಯಕ ವೃತ್ತದ ಬಳಿ ಟೂರಿಸ್ಟ್ ಬಸ್ ಒಂದು ಪಲ್ಟಿಯಾಗಿದೆ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ. ನಗರದಲ್ಲಿ ಬೆಳ್ಳಂಬೆಳಗ್ಗೆ ಬಸ್ ಅಪಘಾತ ನಡೆದಿದೆ.

ಟೂರಿಸ್ಟ್ ಬಸ್ಸೊಂದು ಪ್ರಯಾಣಿಕರನ್ನು ಅವರ ಸ್ಥಳಕ್ಕೆ ತಲುಪಿಸಿ ಹಿಂತುರುಗಿ ಬಸ್ಸನ್ನು ವಾಶ್ ಮಾಡಿಸುವ ಸಲುವಾಗಿ ವಾಪಸ್ ಬರುತ್ತಿರುವಾಗ ನಗರದ ಶಿವಪ್ಪ ನಾಯಕ ವೃತ್ತದ ಮೊಬೈಲ್ ಅಂಗಡಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಚಾಲಕನ ಕಾಲಿಗೆ ಗಂಭೀರವಾದ ಗಾಯಗಳಾಗಿದ್ದು ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ನಗರದ ಬಿಎಚ್ ರಸ್ತೆಯಲ್ಲಿ ಕಳೆದೆರಡು ತಿಂಗಳ ಹಿಂದೆ ಮುಂಜಾನೆ ಬಸ್ಸೊಂದು ಅಂಗಡಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾದಂತಹ ಪ್ರಕರಣ ನಡೆದಿತ್ತು. ಅದೇ ರೀತಿ ಮತ್ತೊಮ್ಮೆ ಟೂರಿಸ್ಟ್ ಬಸ್ಸು ಅಪಘಾತ ಸಂಭವಿಸಿದೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ