ಶಿವಮೊಗ್ಗ : ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಶಿವಮೊಗ್ಗ: ದಿನಾಂಕ:ಸಿಟಿ ರೌಂಡ್ಸ್ ಪತ್ರಿಕೆಯ 25-07-2025 ರ ಸಂಚಿಕೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಆಸ್ತಿ ಪಾಸ್ತಿ ಗಳಿಗೆ ಹಾನಿ ಉಂಟಾಗಿದ್ದು. ಆದರೆ ಮಳೆ ಹಾನಿಯಿಂದ ಮನೆ ಕಳೆದುಕೊಂಡ ಅನೇಕರಿಗೆ ಸುಮಾರು 3-4 ವರ್ಷದಿಂದ ಸರಿಯಾದ ರೀತಿಯಲ್ಲಿ ಪರಿಹಾರ ದೊರಕದ ಕಾರಣ.

ಈ ವಿಚಾರವಾಗಿ ಸಾರ್ವಜನಿಕರಿಂದ ಬಂದಂತಹ ದೂರಿನ ಮೇರೆಗೆ (ಸಿಟಿ ರೌಂಡ್ಸ್ ಪತ್ರಿಕೆಯಲ್ಲಿ) ಪ್ರಕಟವಾಗಿತ್ತು. ಮಳೆ ಹಾನಿಯಿಂದ ಆಸ್ತಿ ಪಾಸ್ತಿ ಹಾಗೂ ಇನ್ನಿತರ ಬೆಳೆಹಾನಿ ವಿಚಾರವಾಗಿ, ಬಡ ವರ್ಗದ ಜನರಿಗೆ ಹಾಗಿರುವ ಸಮಸ್ಯೆಯನ್ನು ಪರಿಹರಿಸಲು, ಬಡವರ, ದಿನ ದಲಿತರ, ಜನ ನಾಯಕರಾದ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ನವರು, ದಿ:31-07 ಇಂದು ವಿಧಾನಸೌಧದಲ್ಲಿ ನಡೆದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆ ಸಭೆ ಭಾಗವಹಿಸಿ. 
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಬೆಳೆ ಹಾಗೂ ಸಾರ್ವಜನಿಕ ಆಸ್ತಿ ಹಾನಿ ಮಾಹಿತಿ ಪಡೆದು, ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಸರ್ಕಾರದ ಸವಲತ್ತುಗಳನ್ನು ಗರಿಷ್ಠ ಜನರಿಗೆ ತಲುಪಿಸುವ ಬಗ್ಗೆ ಸಲಹೆ ಸೂಚನೆ ನೀಡಿದರು.ವೈದ್ಯಕೀಯ, ಶಿಕ್ಷಣ, ರಸ್ತೆ, ಕುಡಿಯುವ ನೀರು, ಮೂಲಭೂತ ಸೌಕರ್ಯಗಳನ್ನು ಸೇರಿದಂತೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಹಾಗೂ ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟ ಮಾರ್ಗದರ್ಶನ ನೀಡಿದರು.
ಈ ವೇಳೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆ.ಆರ್.ಐ.ಡಿ.ಎಲ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಬಿ.ಕೆ ಸಂಗಮೇಶ್, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಶ್ರೀ ನಸೀರ್ ಅಹ್ಮದ್ ಉಪಸ್ಥಿತರಿದ್ದರು.
ಅತಿಶೀಘ್ರದಲ್ಲೇ ನಿಮ್ಮ ಮುಂದೆ


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ