ಶಿವಮೊಗ್ಗ: ಆಗಸ್ಟ್ 08: ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಳೆ ಚುರುಕುಗೊಂಡಿರುವ ಕಾರಣ ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷಿತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.

ತೀರ್ಥಹಳ್ಳಿಯಿಂದ ರಾವೆ- ಕಾನಗೋಡು- ಮಾಸ್ತಿಕಟ್ಟೆ- ಹುಲಿಕಲ್ ಘಾಟ್- ಹೊಸಂಗಡಿ -ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ, ರಾವೆ, ಕಾನುಗೋಡು, ನಗರ, ಕೊಲ್ಲೂರು, ಕುಂದಾಪುರ ರಸ್ತೆ ಮೂಲಕ ಸಂಚರಿಸುವುದು.
ನಗರ ಸಿದ್ದಾಪುರ ರಾಜ್ಯ ಹೆದ್ದಾರಿ-278 ರಸ್ತೆ ತೀರ್ಥಹಳ್ಳಿಯಿಂದ ಯಡೂರು, ಸುಳಗೋಡು, ಮಾಸ್ತಿಕಟ್ಟೆ, ಹುಲಿಕಲ್ ಘಾಟ್, ಹೊಸಂಗಡಿ, ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ, ಯಡೂರು, ಮಾಸ್ತಿಕಟ್ಟೆ, ಕಾನುಗೋಡು, ನಗರ, ಕೊಲ್ಲೂರು, ಕುಂದಾಪುರ ರಸ್ತೆ ಮೂಲಕ ಸಂಚರಿಸುವುದು.
ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ, ನಗರ, ಮಾಸ್ತಿಕಟ್ಟೆ, ಹುಲಿಕಲ್ ಘಾಟ್, ಹೊಸಂಗಡಿ, ಸಿದ್ದಾಪುರ ಮೂಲಕ ಕುಂದಾಪುರದ ಕಡೆ ಹೋಗುವ ಭಾರಿ ವಾಹನಗಳು ಶಿವಮೊಗ್ಗ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ಆನಂತರ ಹೊನ್ನಾವರ ದಿಂದ ಭಟ್ಕಳ, ಬೈಂದೂರು, ಕುಂದಾಪುರ ರಸ್ತೆಯ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರು ಆದೇಶ ಹೊರಡಿಸಿದ್ದಾರೆ.


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ