ಶಿವಮೊಗ್ಗ, ಆಗಸ್ಟ್ 16 : ಜುಲೈ 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8 ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾ 07-12-2025 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, 7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಜುಲೈ 2026ಕ್ಕೆ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅ.15 ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಬೆಂಗಳೂರು-560025 ಇವರಿಗೆ ಸಲ್ಲಿಸಬಹುದೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂ. ಸಂ. : 080-25589459 ಹಾಗೂ ಜಾಲತಾಣ: www.rimc.gov.in ಅಥವಾ ಹತ್ತಿರದ ಸೈನಿಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆಯೆAದು ಉಪ ನಿರ್ದೇಶಕರು(ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ