
ಶಿವಮೊಗ್ಗ : ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಭದ್ರಾವತಿ ನಿವಾಸಿ 21 ವರ್ಷವಯಸ್ಸಿನ ವ್ಯಕ್ತಿ ಒಬ್ಬ ಲೈಂಗಿಕ ದೌರ್ಜನ್ಯ ವೆಸಗಿರುತ್ತಾನೆ.
2023 ನೇ ಸಾಲಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ನೀಡಿದ ದೂರಿನ ಮೇರೆಗೆ. ಲೈಂಗಿಕ ದೌರ್ಜನ್ಯವೆಸಗಿದ 21 ವರ್ಷ ವಯಸ್ಸಿನ ವ್ಯಕ್ತಿಯನ್ನು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಭದ್ರಾವತಿ ನಗರ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಶೈಲ ಕುಮಾರ ಜೆ. ಈ ಪ್ರಕರಣದ ತನಿಖಾಧಿಕಾರಿಗಳಾಗಿ ಪ್ರಕರಣದ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭೀಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ ಪಾಟೀಲ್ ರವರು ಆರೋಪಿತನಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,85,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.

More Stories
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?
ಅಪೌಷ್ಟಿಕತೆ ಮುಕ್ತಗೊಳಿಸಿ-ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ಸೂಚನೆ..
ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಕಾರ್ಯಕ್ರಮಗಳು…