City Rounds News

Kannada News Website

88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂಬ ಆರೋಪ “ನಾಚಿಕೆಗೇಡಿನ ಸಂಗತಿ”: ಮುಖ್ಯಮಂತ್ರಿ ಸಿದ್ದರಾಮಯ್ಯ,

        ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,

ರಾಜ್ಯದಲ್ಲಿ ನಡೆದಂತ ಹಲವು ದುರ್ಘಟನೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು. “ಕಾರ್ಯನಿರತ ಪೊಲೀಸರು ಜಾಗರೂಕರಾಗಿದ್ದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ, ಬ್ಯಾನರ್ ಸಮಸ್ಯೆಯಿಂದಾಗಿ ಬಳ್ಳಾರಿಯಲ್ಲಿ ನಡೆದ ಘರ್ಷಣೆ, ಎಟಿಎಂ ದರೋಡೆ ಪ್ರಕರಣಗಳು ಸೇರಿದಂತೆ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಘಟನೆಗಳನ್ನು ತಪ್ಪಿಸಲು ಸಾಧ್ಯವಾಗುತ್ತಿತ್ತು” ಎಂದು ಹೇಳಿದ್ದಾರೆ.

                                                             “ಪೊಲೀಸರ ಮುನ್ನೆಚ್ಚರಿಕೆಯಿಂದ ದುರ್ಘಟನೆ ನಡೆಯದಂತೆ ತಡೆಯಬಹುದಿತ್ತು”

2024 ಜೂನ್ 4 ರಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ರೋಫಿ -2025 ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಟಗಾರರಿಗೆ ಸನ್ಮಾನ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ನಡೆದಂತ ದುರ್ಘಟನೆಯ ವಿಚಾರವನ್ನು ಸಭೆಯ ಪ್ರಮುಖ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೊಲೀಸ್ ವ್ಯವಸ್ಥೆ ಬಗ್ಗೆ ಈ ರೀತಿಯಾಗಿ ಹೇಳಿದರು. “ಪೊಲೀಸರು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೆ, ಕಾಲ್ತುಳಿತದಲ್ಲಿ ಸಾವನಪ್ಪಿದಂತಹ ಸಂಖ್ಯೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿತ್ತು” ಎಂದು ಹೇಳಿದರು.

                                                            ” ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಉಪಸಮಿತಿ ರಚನೆ”

ಆರ್‌ಸಿಬಿ ಆಟಗಾರರಿಗೆ ಹಮ್ಮಿಕೊಂಡಿದಂತಹ ಸನ್ಮಾನ ಕಾರ್ಯಕ್ರಮ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಂತಹ ಆರ್‌ಸಿಬಿ ಬೆಂಬಲಿಗರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದ್ದು, ಇದರಿಂದಾಗಿ 11 ಜನರು ಸಾವನ್ನಪ್ಪಿ, 70 ಜನರು ಗಾಯಗೊಂಡಿದ್ದಾರೆ. ಈ ರೀತಿಯಾದ ಅವಘಡಗಳು ಭವಿಷ್ಯದಲ್ಲಿ ಮರುಕಳಿಸಿದಂತೆ, ಭಾರಿ ಸಾರ್ವಜನಿಕ ಸಭೆ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ತಪ್ಪಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದ ಮುಖ್ಯಮಂತ್ರಿ, ಚಿನ್ನಸ್ವಾಮಿ ಕಾಲ್ತುಳಿತದ ತನಿಖೆ ನಡೆಸಿದ ನಿವೃತ್ತ ನ್ಯಾಯಾಧೀಶ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

                                             “ಅಪರಾಧ ತನಿಖಾ ಇಲಾಖೆ ತನಿಖಾ ವರದಿ ಸಲ್ಲಿಸಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ”

ಏನೇ ಆದರೂ,ನಿವೃತ್ತ ನ್ಯಾಯಾಧೀಶ ಜಾನ್ ಮೈಕೆಲ್ ಡಿ’ ಕುನ್ಹಾ ಮಾಡಿದ ಎಲ್ಲಾ ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು” ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು. ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಮಹರ್ಷಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್‌ಗಳನ್ನು ಹಾಕುವ ಸಂಬಂಧ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಗುಂಡಿನ ದಾಳಿಗೆ ಕಾರಣವಾದ ಘರ್ಷಣೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖಾ ವರದಿ ಸಲ್ಲಿಸಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬಳ್ಳಾರಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ.

                                             “ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ( ಸಿಎಂ) ಭರವಸೆ”

ಮಹಾರಾಷ್ಟ್ರ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯಿಂದ ಪತ್ತೆಯಾದ ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಮಾದಕ ದ್ರವ್ಯ ಉತ್ಪಾದನಾ ಘಟಕಗಳ ವಿಚಾರವಾಗಿ ಹಾಗೂ ಪೊಲೀಸರ ಕರ್ತವ್ಯದ ಬಗ್ಗೆ ಸಿದ್ದರಾಮಯ್ಯ, “ನಮ್ಮ ಪೊಲೀಸರು ಬೆಂಗಳೂರಿನಲ್ಲಿ ಮಾದಕ ದ್ರವ್ಯ ಉತ್ಪಾದನಾ ಘಟಕಗಳನ್ನು ಪತ್ತೆ ಮಾಡುವಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದರು. ಆದರೆ ಮಾದಕ ದ್ರವ್ಯ ಘಟಕಗಳನ್ನು ಪತ್ತೆ ಮಾಡುವಲ್ಲಿ ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಳೆದ ವರ್ಷ ವರದಿಯಾದ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂಬ ಆರೋಪ “ನಾಚಿಕೆಗೇಡಿನ ಸಂಗತಿ” ಎಂದು ಮುಖ್ಯಮಂತ್ರಿ ಕರ್ತವ್ಯ ದುರುಪಯೋಗ ಪಡಿಸಿಕೊಂಡಂತಹ ಪೊಲೀಸ್ ಅಧಿಕಾರಿಗಳಿಗೆ ಛೀ ಮಾರಿ ಹಾಕಿದರು . ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂಬ ಆರೋಪವು ರಾಜ್ಯಕ್ಕೆ ಮಾತ್ರವಲ್ಲದೆ ಪೊಲೀಸ್ ಇಲಾಖೆಗೂ “ಅಪಖ್ಯಾತಿ” ತಂದಿದೆ. ಪೊಲೀಸ್ ವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯ ವಿಚಾರವಾಗಿ ಹೆಮ್ಮೆಪಡುವಂತ ಸಂಗತಿ, ರಾಯಚೂರಿನ “ಕವಿತಲ ಪೊಲೀಸ್ ಠಾಣೆ “ದೇಶದಲ್ಲಿ ಮೂರನೇ ಅತ್ಯುತ್ತಮ ಪೊಲೀಸ್ ಠಾಣೆಯಾಗಿದೆ ಪಾತ್ರವಾಗಿರುವ ವಿಚಾರ ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.