ಶಿವಮೊಗ್ಗ :ದಿ : 21- ಜನವರಿ, ಶಿವಮೊಗ್ಗ ಗ್ರಾಮಾಂತರ ತಾಲೂಕಿನ 21 ವರ್ಷದ ಯುವಕ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 2022ನೇ ಸಾಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ. ಈ ವಿಚಾರವಾಗಿ ಪ್ರಕರಣ ದಾಖಲಿಸಿಕೊಂಡಂತಹ ಕುಂಸಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಅಭಯ್ ಪ್ರಕಾಶ್ ಸೋಮನಾಳ) ರವರು ಆರೋಪಿಯ ವಿರುದ್ದ, ಪ್ರಕರಣದ ತನಿಖೆ ಪೂರೈಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು . ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1)ರ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ, ಸರ್ಕಾರಿ ಅಭಿಯೋಜಕರವರಾದ ಶ್ರೀಧರ್ ವಾದ ಮಂಡಿಸಿದ್ದು.ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನ ಗೌಡ ಭ ಪಾಟೀಲ್ ರವರು ದಿನಾಂಕ:20-01-2026 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 50,000 ರೂ ದಂಡ, ಹಾಗೂ ದಂಡ ಕಟ್ಟಲುವಿಫಲನಾದಲ್ಲಿ 3 ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ. ಮುಂದು ವರೆದು ಪ್ರಕರಣದಲ್ಲಿನ ನೊಂದ ಬಾಲಕಿಯು ಮೃತ ಪಟ್ಟಿದ್ದು, ಘನ ನ್ಯಾಯಾಲಯವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನೊಂದ ಬಾಲಕಿಯ ತಾಯಿಗೆ 4,00,000/- ರೂ ಹಣವನ್ನು ಪರಿಹಾರವಾಗಿ ನೀಡಲು ಆದೇಶಿಸಿದೆ.


More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ