
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ ವರ್ಷದ ವಾರ್ಷಿಕೋತ್ಸವ ಮತ್ತು ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ: ೦೩-೦೫-೨೦೨೬ನೇ ಭಾನುವಾರ ಬೆಳಿಗ್ಗೆ ೧೦.೩೦ ಗಂಟೆಗೆ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಅದ್ದೂರಿಯಿಂದ ನೆರವೇರಿಸಲಾಯಿತು .
ಕಾರ್ಯಕ್ರಮದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಂದರೆ ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಓದಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ಸದಸ್ಯರ ಮಕ್ಕಳಿಗೆ ಒಟ್ಟು ೨೫ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾನ ಮನಸ್ಕ ಅತ್ಯುತ್ತಮ ವರದಿ ಮಾಡುತ್ತಿರುವ ೧೦ ಮಂದಿ ಪತ್ರಕರ್ತರಿಗೆ ೫ ಮಂದಿ ಸಂಪಾದಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪತ್ರಿಕಾ ವಿತರಕರ ಸಂಘದ ಮುಖ್ಯಸ್ಥರಿಗೆ, ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಸಡಗರದಿಂದ ನಡೆಸಲಾಯಿತು .

ಈ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸಿ.ವಿ. ರಾಘವೇಂದ್ರರಾವ್, ಕಾಮ್ರೇಡ್ ಲಿಂಗಪ್ಪ ಮತ್ತು ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್, ಪಬ್ಲಿಕ್ ಟಿ.ವಿ. ವರದಿಗಾರ ಶಶಿಧರ, ಬಿ-ಟಿ.ವಿ. ವರದಿಗಾರ ಅನಿಲ್, ಸಾಗರದ ಪತ್ರಕರ್ತ ಓಂಕಾರ್ ತಾಳಗುಪ್ಪ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಆಯನೂರು ಮಂಜುನಾಥ್ ಅವರ ಮಾತುಗಳು ನೆರೆದಿದ್ದ ಪತ್ರಕರ್ತರಲ್ಲಿ ಹೊಸ ಚೈತನ್ಯ ತುಂಬಿದ್ದಲ್ಲದೆ, ವೃತ್ತಿಪರ ನೈತಿಕತೆಯನ್ನು ಮರುಚಿಂತಿಸುವಂತೆ ಮಾಡಿತು.

ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ ಹಾಗೂ ಆಯನೂರು ಮಂಜುನಾಥ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್, ಹಿರಿಯ ಪತ್ರಕರ್ತರಾದ ಜಗಳೂರು ಲಕ್ಷ್ಮಣರಾವ್, ಚಿಕ್ಕರಸು ಹಾಗೂ ಎಸ್.ಎಸ್. ಪಾಟೀಲ್, ಜನಶ್ರೀ ವಿಜಯ್, ಮಾಜಿ ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್, ವೈ.ಹೆಚ್.ನಾಗರಾಜ್, ಪತ್ರಕರ್ತರ ಧ್ವನಿ ಸಂಘದ ಜಿಲ್ಲಾಧ್ಯಕ್ಷ ಡಿ.ಜಿ. ನಾಗರಾಜ್, ಉಪಾಧ್ಯಕ್ಷ ಚಿತ್ರಪ್ಪ, ಕಾನೂನು ಸಲಹೆಗಾರ ಷಡಕ್ಷರಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಸತೀಶ್ ಗೌಡ, ಕಾರ್ಯದರ್ಶಿ ಬಿ.ಸಿ. ಶಿವರಾಜ್, ಖಜಾಂಚಿ ಬಿ.ಸಿ.ಗಿರೀಶ್ ಹಾಗೂ ಸಂಘಟನಾ ಕಾರ್ಯದರ್ಶಿ ಎಂ. ಅಣ್ಣಪ್ಪ, ಪದಾಧಿಕಾರಿಗಳಾದ ನಂದನ್ ಕುಮಾರ್ ಸಿಂಗ್, ವಿಷ್ಣು ಪ್ರಸಾದ್, ಮಹಮ್ಮದ್ ಫಾರೂಕ್ ಸೇರಿದಂತೆ ಶಿಕಾರಿಪುರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಹಾಗೂ ಹೊಸನಗರ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


More Stories
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …
ಯುವ ಪ್ರೇಮಿಗಳೇ ಇವನ ಟಾರ್ಗೆಟ್…. ಮಂಜುನಾಥನಾಯ್ಕ ಇವನ ಹಿಂದಿದೆಯೇ ದೊಡ್ಡ ರಾಬರಿ ಗ್ಯಾಂಗ್ …?
ಜನಪ್ರತಿನಿಧಿಗಳ ಕರೆಗೆ ಅಧಿಕಾರಿಗಳು ಡೋಂಟ್ ಕೇರ್ :ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ರೋಶ..!!