City Rounds News

Kannada News Website

ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 13 ರಂದು ನೇರ ಸಂದರ್ಶನ .!! ಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ..!

ಶಿಮೊಗ್ಗ  ಜು-10 

ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 13 ರಂದು ನೇರ ಸಂದರ್ಶನ .!!

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಇದೇ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ‘ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಭಾಗವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
 ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ತೇರ್ಗಡೆ ಹೊಂದಿರುವ, 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಪ್ರವೇಶ ಉಚಿತವಾಗಿರುತ್ತದೆ.
ನೇರ ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆಗಳು: 9108235132, 9380663606 ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಗಳು ತಿಳಿಸಿದ್ದಾರೆ.


ಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ..!

2026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಐಟಿಐ ಪೂರೈಸಿದವರಿಗೆ 4 ತಿಂಗಳ ಸಿ.ಏನ್.ಸಿ. ಆಪರೇಟರ್ – ವರ್ಟಿಕಲ್ ಮಷಿನ್ನಿಂಗ್ ಸೆಂಟರ್, ಡಿಪ್ಲೋಮ /ಬಿ.ಇ ಪೂರೈಸಿದವರಿಗೆ 4 ತಿಂಗಳ ಸಿ ಏನ್ ಸಿ ಪ್ರೋಗ್ರಾಮರ್ /ಪ್ರೊ-ಇ / ಆಟೋ ಕ್ಯಾಡ್/ ಐಓಟಿ, ಎಸ್.ಎಸ್.ಎಲ್.ಸಿ. ಪೂರೈಸಿದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಹಾಗೂ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಮುಗಿದ ನಂತರ ತಾಂತ್ರಿಕ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳಿಗೆ ರೂ. 2500/- ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆಯ ದಾಖಲಾತಿಗಳು ಹಾಗು ವೈಯಕ್ತಿಕ ವಿವರಗಳೊಂದಿಗೆ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ.ಸಿಎ 38,ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಇಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08182-246054/9448307027/ 9449286543 ಗಳನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ.