City Rounds News

Kannada News Website

ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ

ಶಿವಮೊಗ್ಗ, ಆಗಸ್ಟ್ 17  ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಹಿಂದುಳಿದ ವರ್ಗಗಳ ಜಾತಿಯ ಒಕ್ಕೂಟದ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಹಿಂ.ವ.ಕ.ಇ.ಯ ಜಿಲ್ಲಾ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಿವಮೊಗ್ಗ ಶಂಕರಘಟ್ಟ, ಜ್ಞಾನಸಹ್ಯಾದ್ರಿಯ ಕನ್ನಡ ಭಾರತಿ ಕುವೆಂಪು ವಿಶ್ವವಿದ್ಯಾಲಯದ ನಿರ್ದೇಶಕರು ಮತ್ತು ಪ್ರಾಧ್ಯಾಪಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಇವರಿಂದ ಡಿ.ದೇವರಾಜ ಅರಸುರವರ ಜೀವನ ಚರಿತ್ರೆ ಮತ್ತು ಸಾಧನೆಗಳು ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಇಲಾಖೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 8.30ಕೆ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ವಿವಿಧ ಜನಪದ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಡಿ.ದೇವರಾಜು ಅರಸುರವರ ಭಾವಚಿತ್ರದ ಮೆರವಣೆಗೆಯನ್ನು ಆಯೋಜಿಸಲಾಗಿದೆ.


        ಎರಡು ವರ್ಷಗಳ ಡಿಪ್ಲೊಮಾ (ಕೃಷಿ) ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

 

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.
ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). ದಿನಾಂಕ: 20-08-2026 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.
ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್‌ಸೈಟ್: www.uahs.edu.in  ನಲ್ಲಿ ದಿನಾಂಕ: 15-08-2026 ರಿಂದ 20-08-2026 ರವರೆಗೆ ಡೌನ್ ಲೋಡ್ ಮಾಡಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 20-08-2026, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣದಲ್ಲಿ ನಡೆಯುವ ಮುಕ್ತ ಕೌನ್ಸಿಲಿಂಗ್ ಪ್ರಕ್ರಿಯೆಯ ದಿನ ತರುವುದು.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳ  ಡಿ.ಡಿ. ಯನ್ನು Comptroller, KSNUAHS, Shivamogga ಹೆಸರಿನಲ್ಲಿ ತೆಗೆದುಕೊಳ್ಳುವುದು.
ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಕೆ.ಶಿ.ನಾ.ಕೃ. ಮ. ತೋ. ವಿ.ವಿವಿಯ ಕುಲಸಚಿವರು ತಿಳಿಸಿದ್ದಾರೆ.


ಕುವೆಂಪು ವಿವಿಯಲ್ಲಿ ಎರಡು ವರ್ಷಗಳ ಅವಧಿಯ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 17: (ಕರ್ನಾಟಕ ವಾರ್ತೆ): ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿಯ ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗಕ್ಕೆ ಮಾಲಿಕ್ಯುಲರ್ ಜೆನೆಟಿಕ್ ಸ್ಟಡಿ ಆಫ್ ಸಿದ್ಧಿ ಟೈಬಲ್ ಪಾಪ್ಯುಲೇಷನ್ ಎಂಬ ಶೀರ್ಷಿಕೆಗೆ ಎರಡು ವರ್ಷಗಳ ಅವಧಿಗೆ ಒಂದು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಎಂಎಸ್ಸಿ, ಪ್ರಾಣಿಶಾಸ್ತ್ರ ವಿಷಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ಮಾಲಿಕ್ಯುಲರ್ ಬಯೋಲಜಿ ಟೆಕ್ನಿಕ್ ನಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಹಾಗೂ ಇತರೆ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ www.kuvempu.ac.in ನಿಂದ ಪಡೆದು, ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಸ್ವವಿವರಗಳು, ವಿದ್ಯಾರ್ಹತೆ, ಅನುಭವ ಇವುಗಳಿಗೆ ಸಂಬಂಧಿಸಿದ ದೃಢೀಕೃತ ಜೆರಾಕ್ಸ್ ದಾಖಲೆಗಳೊಂದಿಗೆ ಆ.31 ರೊಳಗಾಗಿ ಪ್ರೊ. ನಾಗರಾಜ, ಪ್ರಧಾನ ಸಂಶೋಧಕರು, ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಅಥವಾ ಇ-ಮೇಲ್ knagarajv@gmail.com  ಮೂಲಕ ಸಲ್ಲಿಸುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 25000/-ಗಳನ್ನು ನೀಡಲಾಗುವುದು. ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ಅರ್ಹ ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಕುವೆಂಪು ವಿವಿಯ ಪ್ರಧಾನ ಸಂಶೋಧಕರಾದ ಪ್ರೊ. ನಾಗರಾಜ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.