ಶಿವಮೊಗ್ಗ,ಸೆ-20

ರಾಜ್ಯದ ವಿವಿಧ ಜೈಲುಗಳಲ್ಲಿ ಪೊಲೀಸರು ನಡೆಸಿದ ದಾಳಿ ವೇಳೆ, ಕೀಪೈಡ್ ನಿಂದ ಸ್ಮಾರ್ಟ್ ಮೊಬೈಲ್ ಗಳ ವರೆಗೆ ಹಲವು ಬಗೆಯ ಫೋನ್‌ಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೈದಿಗಳು ಕಾರಾಗೃಹದಲ್ಲಿದ್ದುಕೊಂಡೇ ರಾಜಾರೋಷವಾಗಿ ಮೊಬೈಲ್ ಬಳಸುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ.
ಕೈದಿಗಳಿಗೆ ಮೊಬೈಲ್ ನಿಷೇಧವಿದ್ದರೂ ಜೈಲುಗಳಲ್ಲಿರುವ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 9 ತಿಂಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ.
ಈ ಪೈಕಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರೋಬ್ಬರಿ 334 ಮೊಬೈಲ್ ಗಳು ಪತ್ತೆಯಾಗಿದ್ದು, ಅವುಗಳನ್ನು ಸೀಜ್ ಮಾಡಲಾಗಿದೆ. ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಕಠಿಣ ನಿಯಮ ಜಾರಿ ಮಾಡಿರುವುದರಿಂದ ಅವರ ಅವಧಿಯಲ್ಲೇ ಜೈಲುಗಳಲ್ಲಿ ಹೆಚ್ಚು ಮೊಬೈಲ್ ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
2023ರಲ್ಲಿ 72 ಮೊಬೈಲ್ ಗಳು ಮತ್ತು 28 ಸಿಮ್ ಗಳು ಪತ್ತೆಯಾಗಿವೆ. 2024ರಲ್ಲಿ 104 ಮೊಬೈಲ್ ಹಾಗೂ 10 ಸಿಮ್ ಗಳು ಪತ್ತೆಯಾಗಿವೆ. 2025ರಲ್ಲಿ 148 ಮೊಬೈಲ್ ಹಾಗೂ 68 ಸಿಮ್ ಗಳು ಹಾಗೂ 2026ರಲ್ಲಿ 410 ಮೊಬೈಲ್ ಹಾಗೂ 228 ಸಿಮ್ ಗಳು ಪತ್ತೆಯಾಗಿವೆ. ಜೈಲಿನಲ್ಲಿ ವರ್ಷದಿಂದ ವರ್ಷಕ್ಕೆ ಮೊಬೈಲ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿವೆ.

ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರ ಅವಧಿಯಲ್ಲಿಯೇ ಹೆಚ್ಚು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ 6-7 ಮೊಬೈಲ್ ಅಷ್ಟೇ ಜೈಲಿನಲ್ಲಿ ಇರೋ ಸಾಧ್ಯತೆ ಇದೆ.


More Stories
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!
ಸಂಗ್ರ ಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇಮಾಡಿ : ಪ್ರಭುಲಿಂಗ ಕವಳಿಕಟ್ಟಿ