ಶಿವಮೊಗ್ಗ-15

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ಸಹಿಯನ್ನೇ ನಕಲು (ಫೋರ್ಜರಿ) ಮಾಡಿದ ಗಂಭೀರ ಆರೋಪದ ಮೇಲೆ, ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಈ ಹಿಂದಿನ ಸಹಾಯಕ ನಿರ್ದೇಶಕ ಯಶವಂತ್ ಕುಮಾರ್ ಬಿ.ಟಿ. ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಯಶವಂತ್ ಕುಮಾರ್ ಬಿ.ಟಿ. ಅವರ ವಿರುದ್ಧ ಜಿಲ್ಲಾಧಿಕಾರಿಗಳ ಸಹಿಯನ್ನು ನಕಲು ಮಾಡಿದ ಆರೋಪ ಕೇಳಿಬಂದಿತ್ತು. ಈ ಕುರಿತು ದಾಖಲೆಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿತ್ತು. ಎಫ್‌ಎಸ್‌ಎಲ್ (FSL) ವರದಿಯಲ್ಲಿ ಜಿಲ್ಲಾಧಿಕಾರಿಗಳ ಸಹಿಯನ್ನು ನಕಲು ಮಾಡಿರುವುದು ದೃಢಪಟ್ಟಿತ್ತು.
ಪೊಲೀಸ್ ದೂರು ಮತ್ತು ಶಿಸ್ತು ಕ್ರಮ:
ಸಹಿ ನಕಲು ಸಾಬೀತಾದ ಬೆನ್ನಲ್ಲೇ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ತೇಜಾನಂದ ರೆಡ್ಡಿ ಅವರು ಯಶವಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮತ್ತೊಂದೆಡೆ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಪ್ರಭು ಅವರು, ತಪ್ಪಿತಸ್ಥ ಅಧಿಕಾರಿ ಯಶವಂತ್ ಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದರು. ಈ ಶಿಫಾರಸಿನ ಅನ್ವಯ ಇದೀಗ ಯಶವಂತ್ ಕುಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.


More Stories
ಸೌಜನ್ಯ ಪ್ರಕರಣ : ಸಾಕ್ಷಿಗಳು ಮತ್ತು ಕುಟುಂಬಸ್ಥರ ವಿಚಾರಣೆ..!!
ಇ-ಖಾತಾ ಹಗರಣ : 33 ಜನರ ವಿರುದ್ಧ FIR ದಾಖಲು
ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಗಿಫ್ಟ್..?