ಶಿವಮೊಗ್ಗ, ಅಕ್ಟೋಬರ್ 07 (ಸಿಟಿ ರೌಂಡ್ಸ್): ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.

ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಅ.07 ರಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ವತ್ತಿ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!