ಮಂಡ್ಯ ಅಕ್ಟೋಬರ್ 08 (ಸಿಟಿ ರೌಂಡ್ಸ್):: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.
ನಾಗಮಂಗಲ ಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ ಟೌನ್ ಠಾಣೆ ಪಿಎಸ್‌ಐ ಬಿ.ಜೆ. ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಟಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಪಿಎಸ್‌ಐ ರವಿ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಪೊಲೀಸ್ ಪೇದೆ ರಮೇಶ್ ಅವರನ್ನು ಕೂಡ ಅಮಾನತು ಮಾಡಲಾಗಿದೆ.

More Stories
ಜೈಲಿನ ಖೈದಿಗಳ ಬಳಿ ವರ್ಷದಿಂದ ವರ್ಷಕ್ಕೆ ಮೊಬೈಲ್ಗಳ ಸಂಖ್ಯೆಯಲ್ಲಿ ಹೆಚ್ಚಳ : 410 ವಿವಿಧ ಕಂಪನಿಯ ಮೊಬೈಲ್ ಪತ್ತೆ..!!
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸೂಚನೆಯಾದರೂ ಏನು ..?
ಪಾವಗಡ ಶಾಸಕರೇ, ಅಧಿಕಾರದ ದರ್ಪ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ: ಜನರೇ ನಿಜವಾದ ಪ್ರಭುಗಳು, ರಾಜಕಾರಣಿಗಳಲ್ಲ!