City Rounds News

Kannada News Website

ಜೀವನದಲ್ಲಿ ಕಾನೂನಾತ್ಮಕವಾದ ದಾರಿಯಲ್ಲಿ ಸಾಗಿದರೆ ನೆಮ್ಮದಿ ಬದುಕು ಸಾಧ್ಯ- ನ್ಯಾ.ಮಂಜುನಾಥ್ ನಾಯಕ್…

ಜೀವನದಲ್ಲಿ ಗುರಿ ಸಾಧಿಸಲು ಕಾನೂನಾತ್ಮಕವಾಗಿ ಸರಿದಾರಿಯಲ್ಲಿ ಸಾಗಬೇಕು. ಆಗ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯ. ಇದಕ್ಕಾಗಿಯೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ “ಕ್ರಿಯೆಯ ಮೂಲಕ ಸಮಾಧಾನ” ಎಂಬ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು.

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ  ಶಿವಮೊಗ್ಗ, ಮಹಾನಗರಪಾಲಿಕೆ ಶಿವಮೊಗ್ಗ, ಜಿಲ್ಲಾ ಸ್ವಯಂ ಸೇವಾಸಂಸ್ಥೆಗಳ ಒಕ್ಕೂಟ ಹಾಗೂ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್, ಇವರುಗಳ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗದ ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ನ ಸಭಾಂಗಣದಲ್ಲಿ ಅ.03 ರಂದು “ಕ್ರಿಯೆಯ ಮೂಲಕ ಸಮಾಧಾನ” (ವಿಧಾನ್ಸೇ-ಸಮಾಧಾನ) ಎಂಬ ಶೀರ್ಷಿಕೆ ಅಡಿ ಮಹಿಳಾ ಸಬಲೀಕರಣ ಕುರಿತು ಏರ್ಪಡಿಸಲಾಗಿದ್ದ ಕಾನೂನು ಜಾಗೃತಿ ಕಾರ್ಯಕ್ರಮ ಹಾಗೂ ಸರ್ಕಾರಗಳ ಮಹಿಳಾ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ನೀಡುವ ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಸಂಬAಧಿಸಿದAತೆ ಅನೇಕ ಕಾನೂನುಗಳು ಜಾರಿಯಲ್ಲಿದ್ದರೂ ಸಹ ಇಂದಿಗೂ ಸಹ ಅನೇಕ ಮಹಿಳೆಯರು ತಮಗಾಗಿಯೇ ಇರುವ ಕಾನೂನುಗಳ ಬಗ್ಗೆ ಸರಿಯಾದ ಮಾಹಿತಿ ಪಡೆದಿಲ್ಲ ಆದ್ದರಿಂದ ಮಹಿಳೆಯರಿಗಾಗಿ ಇರುವ ಕಾನೂನುಗಳು ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮಹಿಳೆಯರು ಆಸಕ್ತಿಯಿಂದ ಈ ಕಾರ್ಯಗಾರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.